ಸುಳ್ಯ:ದ.ಕ. ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಸುಳ್ಯ ಮತ್ತು ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳು ಬಾಳಿಲ ಇವರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕಾಲ ನಡೆಯುವ ಸುಳ್ಯ ತಾಲೂಕು ಮಟ್ಟದ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಕ್ರೀಡಾಕೂಟ ಅ.16 ರಂದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಆರಂಭಗೊಂಡಿತು. ಕ್ರೀಡಾ ಕೂಟವನ್ನು ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು.
ಬಾಳಿಲ ಗ್ರಾ.ಪಂ. ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಎಂ. ಅಧ್ಯಕ್ಷತೆ ವಹಿಸಿದ್ದರು.ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು ಧ್ವಜಾರೋಹಣಗೈದರು. ಜಿ.ಪಂ.ಸದಸ್ಯರಾದ ಆಶಾ ತಿಮ್ಮಪ್ಪ, ಎಸ್.ಎನ್. ಮನ್ಮಥ, ಪುಷ್ಪಾವತಿ ಬಾಳಿಲ, ಹರೀಶ್ ಕಂಜಿಪಿಲಿ, ಬಾಳಿಲ ಗ್ರಾ.ಪಂ. ಸದಸ್ಯರಾದ ರಾಧಾಕೃಷ್ಣ ರಾವ್ ಯು, ಸರಸ್ವತಿ ಸಿ.ಹೆಚ್, ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯ, ರಾಷ್ಟ ಪ್ರಶಸ್ತಿ ಪುರಸ್ಕೃತ ಬಿ.ವಿ. ಶಗ್ರಿತ್ತಾಯ, ಶಾಲಾ ಸಂಚಾಲಕ ಎನ್. ವೆಂಕಟರಮಣ ಭಟ್, ಕ್ಷೇತ್ರ ಸಮನ್ವಯಾಧಿಕಾರಿ ವೀಣಾ ಎಂ.ಟಿ, ವಿದ್ಯಾಬೋಧಿನೀ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಶಿವರಾಮ ಶಾಸ್ತ್ರಿ ಎಂ.ಎಸ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಚ್ಚುತ ಮಲ್ಕಜೆ, ಎಸ್.ಡಿ.ಎಂ.ಸಿ. ಅಧ್ಯಕ್ಷ ಬಾಲಕೃಷ್ಣ ಪುತ್ಯ, ಜಿಲ್ಲಾ ಗ್ರೇಡ್ 1 ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್ ಯೇನೆಕಲ್ಲು, ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಧನಂಜಯ ಸಂಪಾಜೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರತಿನಿಧಿ ತೇಜಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ ರೈ ಕೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾತುಗಳೊಂದಿಗೆ ವಿದ್ಯಾರ್ಥಿನಿ ಕು. ಅನ್ವಿತಾ ಕ್ರೀಡಾ ಪ್ರತಿಜ್ಞೆ ನೆರವೇರಿಸಿದರು.
ಬಾಳಿಲ ವಿದ್ಯಾಬೋಧಿನೀ ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯ ವೈ ಬಿ.ಸುಬ್ಬಯ್ಯ ವಂದಿಸಿ ಸಹ ಶಿಕ್ಷಕ ಯಶೋಧರ ನಾರಾಲು ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾಕೂಟ ಅ.17ರಂದು ಸಮಾಪನಗೊಳ್ಳಲಿದೆ.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…