ಸುಳ್ಯ: ಸುಳ್ಯ ತಾಲೂಕು ಮುಖ್ಯಶಿಕ್ಷಕರ ಹಾಗೂ ಪ್ರಾಂಶುಪಾಲರ ಸಮಾವೇಶ ಮತ್ತು ಸನ್ಮಾನ ಕಾರ್ಯಕ್ರಮ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ನಿವೃತ್ತ ಪ್ರಾಂಶುಪಾಲರಾದ ಚಿದಾನಂದ ಎಂ ಮತ್ತು ಯು ಸು ಗೌ ಅವರನ್ನು ಕೆ ಆರ್ ಗಂಗಾಧರ ಸನ್ಮಾನಿಸಿ ನಿವೃತ್ತಿ ಆದವರು ಪ್ರವೃತ್ತಿಯನ್ನು ಇನ್ನೂ ಕೂಡಾ ಮುಂದುವರಿಸಬೇಕೆಂದು ಕರೆ ನೀಡಿದರು. ಶ್ರೀಕೃಷ್ಣ ಉಪಾಧ್ಯಾಯ ಮುಖ್ಯ ಭಾಷಣ ಮಾಡಿದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪುರುಷೋತ್ತಮ ಕಜೆ , ಮುಖ್ಯ ಶಿಕ್ಷಕ ಚಂದ್ರಶೇಖರ ಪೇರಾಲ್ ಉಪಸ್ಥಿತರಿದ್ದರು. ಚಿದಾನಂದ ಅಧ್ಯಕ್ಷತೆ ವಹಿಸಿದ್ದರು.
ಸಂಘದ ಕಾರ್ಯದರ್ಶಿ ಎಂ.ಎಸ್. ಶಿವರಾಮ ಶಾಸ್ತ್ರಿ ಸ್ವಾಗತಿಸಿ, ಸಹ ಕಾರ್ಯದರ್ಶಿ ಚಿದಾನಂದ ಕೇನಾಜೆ ವಂದಿಸಿದರು. ಸನ್ಮಾನಿತರನ್ನು ಯಶವಂತ ರೈ ಹಾಗೂ ಉಮಾಕುಮಾರಿ ಬೆಳ್ಳಾರೆ ಪರಿಚಯಿಸಿದರು. ಆನಂದ್ ವೈ ಎ.ಕಾರ್ಯಕ್ರಮ ನಿರೂಪಿಸಿದರು.
ಬಳಿಕ ನಡೆದ ಮಹಾಸಭೆಯಲ್ಲಿ ನೂತನ ಪದನಿಮಿತ್ತ ಅಧ್ಯಕ್ಷರಾಗಿ ಸ ಪ ಪೂ ಕಾಲೇಜು ಪ್ರಾಂಶುಪಾಲ ಮೋಹನ್ ಹಾಗೂ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ದುಗಲಡ್ಕ, ಉಪಾಧ್ಯಕ್ಷರಾಗಿ ಪ್ರಭಾಕರ ಕಿರಿಭಾಗ ಮತ್ತು ನಳಿನಿ ಗಾಂಧಿನಗರ, ಸಹಕಾರ್ಯದರ್ಶಿಯಾಗಿ ಅಮರನಾಥ್ ಇವರನ್ನು ಆಯ್ಕೆ ಮಾಡಲಾಯಿತು.
ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…