ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ಯುವ ಘಟಕದ ಆಶ್ರಯದಲ್ಲಿ ಮಂಗಳವಾರ ಬೆಳಗ್ಗೆ 9 ರಿಂದ ಕಾಯರ್ತೋಡಿಯಲ್ಲಿ ಸವಿತಾ ಕೆಸರುಗದ್ದೆ ಕ್ರೀಡಾಕೂಟ ಆರಂಭಗೊಂಡಿದೆ.ಕಾರ್ಯಕ್ರಮವನ್ನು ನ ಪಂ ಸದಸ್ಯೆ ಪ್ರವಿತಾ ಪ್ರಶಾಂತ್ ಉದ್ಘಾಟಿಸಿದರು.
ಸಭಾಧ್ಯಕ್ಷತೆಯನ್ನು ಸವಿತಾ ಸಮಾಜದ ಯುವಘಟಕದ ಅಧ್ಯಕ್ಷ ಪ್ರಸನ್ನ ಬಿ ಪಂಜ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಕಾಯರ್ತೋಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಾರಾಯಣ ಕೇಕಡ್ಕ, ಕಾಯರ್ತೋಡಿಯ ಪ್ರಶಾಂತ ಆಚಾರ್ಯ. ನಾರಾಯಣ ಆಚಾರ್ಯ , ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಗುರುರಾಜ್ ಅಜ್ಜಾವರ ಮೊದಲಾದವರು ಉಪಸ್ಥಿತರಿದ್ದರು. ನವೀನ್ ಸೋಂತೋಡು, ಮಹೇಶ್ ಸಾಲ್ತಾಡಿ , ಜಯಪ್ರಕಾಶ್, ರಕ್ಷಿತ್ ಮೊದಲಾದವರು ಇದ್ದರು.
ಸುಳ್ಯ ತಾಲೂಕು ಸವಿತಾ ಸಮಾಜದ ಯುವ ಘಟಕದ ಕಾರ್ಯದರ್ಶಿ ಉದಯ ಜಟ್ಟಿಪ್ಪಳ್ಳ ಸ್ವಾಗತಿಸಿ ಸುಳ್ಯ ಸವಿತಾ ಸಮಾಜದ ಗೌರವ ಸಲಹೆಗಾರ ಹರೀಶ್ ಬಂಟ್ವಾಳ ಪ್ರಸ್ತಾವನೆಗೈದವರು.
ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಸುಳ್ಯ ಸವಿತಾ ಸಮಾಜದ ಗೌರವ ಸಲಹೆಗಾರ ಹರೀಶ್ ಬಂಟ್ವಾಳ ಹಾಗೂ ಬಾರ್ಬರ್ ಎಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಬಹುಮಾನ ವಿತರಿಸುವರು.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…