ಸುಳ್ಯ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಸುಳ್ಯ ತಾಲೂಕು ಆರೋಗ್ಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಸುಳ್ಯ ನಗರದಲ್ಲಿ 52 ತಂಬಾಕು ನಿಯಂತ್ರಣ ಕಾನೂನು(ಕೋಟ್ಪಾ-2003) ಉಲ್ಲಂಘನೆ ಪ್ರಕರಣವನ್ನು ಪತ್ತೆ ಹಚ್ಚಿ 4,200 ದಂಡ ವಸೂಲಿ ಮಾಡಿದ್ದಾರೆ.
ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜಸೇವಾ ಕಾರ್ಯಕರ್ತೆ ಶ್ರುತಿ, ರಾಜ್ಯ ತಂಬಾಕು ನಿಯಂತ್ರಣ ಕೋಶದ ವಿಭಾಗೀಯ ಸಂಯೋಜಕ ಸಂಪತ್ ಕುಮಾರ್ ನೇತೃತ್ವದಲ್ಲಿ ಸುಳ್ಯ ನಗರದ ವಿವಿಧ ಅಂಗಡಿಗಳಲ್ಲಿ ಮತ್ತು ಚಿಲ್ಲರೆ ವ್ಯಪಾರ ಕೇಂದ್ರಗಳಲ್ಲಿ ದಾಳಿ ನಡೆಸಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘನೆ ಪ್ರಕರಣವನ್ನು ಪತ್ತೆ ಹಚ್ಚಿದರು. ಶಾಲಾ ಕಾಲೇಜು ಬಳಿಯಲ್ಲಿ ಅಂಗಡಿಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಿದ ಮತ್ತು ಸೆಕ್ಷನ್ 6ಬಿ ಬೋರ್ಡನ್ನು ಅಳವಡಿಸದ ಸಂಬಂಧಪಟ್ಟು ಕಾಯಿದೆಯ ಸೆಕ್ಷನ್ 6ಬಿ ಅನ್ವಯ 17 ಪ್ರಕರಣ ದಾಖಲಿಸಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಎಚ್ಚರಿಕೆಯ ಫಲಕ ಅಳವಡಿಸದಿರುವ, ಸಾರ್ವಜನಿಕ ಸ್ಥಳಗಳಲ್ಲಿ ಲೈಟರ್, ಆಸ್ಟ್ರೇ, ಬೆಂಕಿ ಕಡ್ಡಿ ಪೊಟ್ಟಣ ಪ್ರದರ್ಶನ ಸಂಬಂಧಿಸಿ ಸೆಕ್ಷನ್ 4 ಪ್ರಕಾರ 28 ಪ್ರಕರಣ ಮತ್ತು 18 ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನಗಳ ಮಾರಾಟ, ಚಿಲ್ಲರೆ ಅಂಗಡಿಗಳಲ್ಲಿ ಸೆಕ್ಷನ್ 6ಎ ಬೋರ್ಡ್ ಅಳವಡಿಸದ, ಚಿಲ್ಲರೆ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಪ್ರದರ್ಶನ ಸಂಬಂಧಪಟ್ಟು ಸೆಕ್ಷನ್ 6ಎ ಅನ್ವಯ ಏಳು ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಲಾಗಿದೆ. ನಗರದ ವಿವಿಧ ಅಂಗಡಿ ಮುಂಗಟ್ಟುಗಳಲ್ಲಿ ತೆರಳಿ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸುವುದರ ಜೊತೆಗೆ ತಂಬಾಕು ನಿಯಂತ್ರಣ ಕಾನೂನು ಅನುಷ್ಠಾನದ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು. ಮಾಹಿತಿ ಪತ್ರಗಳನ್ನು ನೀಡಲಾಯಿತು. ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಅಧಿಕಾರಿಗಳಾದ ವಾಸುದೇವ ನಾಯಕ್, ಪ್ರಮೀಳಾ, ಆಶಿಕ್ ಮತ್ತಿತರರು ಇದ್ದರು.
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…
ನಾಡಿನ ಸಮಸ್ತರಿಗೂ ಮಕರ ಸಂಕ್ರಾಂತಿ ಶುಭಾಶಯ. ರೈತರಿಗೂ ಇದು ಸುಗ್ಗಿಯ ಹಬ್ಬ. ಈ…
ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ…