ಸುಳ್ಯ ನಗರದ ಕಸ ಮತ್ತೆ ಕಲ್ಚೆರ್ಪೆಗೆ : ಸ್ಥಳೀಯರಿಂದ ಪ್ರತಿಭಟನೆ

October 14, 2019
10:12 PM

ಸುಳ್ಯ: ಸುಳ್ಯ ನಗರದ ಕಸವನ್ನು ನಗರ ಪಂಚಾಯತ್ ಕಲ್ಚೆರ್ಪೆಗೆ ಮತ್ತೆ ತಂದು ಹಾಕುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಕಲ್ಚೆರ್ಪೆಯಲ್ಲಿ ಅ.14 ರಂದು ಪ್ರತಿಭಟನೆ ನಡೆಸಿದರು.

Advertisement

ಪ್ರತಿಭಟನೆಯಲ್ಲಿ ಮಾತನಾಡಿದ ಮಡಿಕೇರಿ ತಾ.ಪಂ. ಸದಸ್ಯ ನಾಗೇಶ್ ಕುಂದಲ್ಪಾಡಿ ಇಲ್ಲಿ ಕಸ ಹಾಕುವ ಪ್ರಸ್ತಾಪ ಆರಂಭದಲ್ಲಿ ಬಂದಾಗ ನಾವು ಹೋರಾಟ ನಡೆಸಿದ್ದೆವು. ಆದರೆ ಇಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ವ್ಯವಸ್ಥೆ ಮಾಡುವುದಾಗಿ ಹೇಳಿ ಕಸ ಹಾಕಲು ಆರಂಭಿಸಿದ್ದರು. ಆದರೆ ಆಧುನಿಕ ತಂತ್ರಜ್ಞಾನದ ಸಹಾಯದಿಂದ ಕಸ ವಿಲೇವಾರಿ ಮಾಡಿಲ್ಲ. ಕಸವನ್ನು ಹಾಗೆ ತಂದು ಹಾಕಲಾಯಿತು. ಇದರಿಂದ ಈ ಪರಿಸರದ ಜನರು ತೀವ್ರ ತೊಂದರೆ ಅನುಭವಿಸುವಂತಾಯಿತು. ಇಲ್ಲಿಗೆ ಕಸ ಹಾಕುವುದು ಮುಂದುವರಿದರೆ ಇನ್ನಷ್ಟು ತೊಂದರೆ ಆಗಬಹುದು, ಅಲ್ಲದೆ ನಗರ ಪಂಚಾಯತ್ ಕೂಡ ಸಮಸ್ಯೆ ಎದುರಿಸಬೇಕಾದೀತು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಅಶೋಕ್ ಪೀಚೆ ಇಲ್ಲಿಗೆ ಕಸ ಹಾಕಿ ಸಾರ್ವಜನಿಕರಿಗೆ ತೊಂದರೆ ನೀಡಬಾರದು ಎಂಬುದು ನಮ್ಮ ಬೇಡಿಕೆ. ಜನರ ಭಾವನೆಗಳಿಗೆ ವಿರುದ್ಧವಾಗಿ ಕಸ ಹಾಕುವುದು ಮುಂದೆವರಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದರು.

ನ.ಪಂ. ಮಾಜಿ ಸದಸ್ಯ ಕೆ.ಗೋಕುಲ್‌ದಾಸ್ ಮಾತನಾಡಿ ನಾನು ನ.ಪಂ. ಸದಸ್ಯನಾಗಿದ್ದ ಸಂದರ್ಭ ಕಲ್ಚರ್ಪೆಗೆ ಕಸ ಹಾಕಬಾರದೆಂದು ಗಟ್ಟಿಯಾಗಿ ಧ್ವನಿ ಎತ್ತಿದ್ದೆ. ಬದಲಿ ಜಾಗದ ವ್ಯವಸ್ಥೆಯ ಬಗ್ಗೆಯೂ ಸಲಹೆ ನೀಡಿದ್ದೆ. ಒಂದು ವರ್ಷದಿಂದ ಈ ಪ್ರದೇಶಕ್ಕೆ ಕಸ ಬರುತ್ತಿರಲಿಲ್ಲ. ಈಗ ಮತ್ತೆ ಬರುತ್ತಿದೆ. ಇದನ್ನು ತಕ್ಷಣ ನಿಲ್ಲಿಸಬೇಕು ಇಲ್ಲವಾದರೆ ನ.ಪಂ. ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.

Advertisement

ಆಲೆಟ್ಟಿ ಗ್ರಾ.ಪಂ. ಅಧ್ಯಕ್ಷ ಹರೀಶ್ ಹಾಗೂ ಸದಸ್ಯ ಯೂಸಫ್ ಅಂಜಿಕಾರು ಮಾತನಾಡಿದರು. ಬಾಪೂ ಸಾಹೇಬ್, ಪುಷ್ಪಾವತಿ, ರಾಧಾಕೃಷ್ಣ ಪರಿವಾರಕಾನ, ಜನಾರ್ದನ , ದೇವಕಿ, ಜಲಜಾಕ್ಷಿ, ಬಾಲಚಂದ್ರ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |
August 11, 2025
1:47 PM
by: ಸಾಯಿಶೇಖರ್ ಕರಿಕಳ
ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ
August 11, 2025
8:43 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್
August 11, 2025
7:27 AM
by: ದ ರೂರಲ್ ಮಿರರ್.ಕಾಂ
ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ
August 10, 2025
7:00 AM
by: ನಾ.ಕಾರಂತ ಪೆರಾಜೆ

You cannot copy content of this page - Copyright -The Rural Mirror

Join Our Group