Advertisement
MIRROR FOCUS

ಸುಳ್ಯ ನಗರದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಸಚಿವರಿಗೆ ಮನವಿ

Share

ಸುಳ್ಯ: ಸುಳ್ಯ ನಗರದಲ್ಲಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ತುರ್ತು ಗಮನ ಹರಿಸಬೇಕು ಎಂದು ಆಗ್ರಹಿಸಿ ಸುಳ್ಯ ನಗರ ಬಿಜೆಪಿ ಮತ್ತು ನಗರ ಪಂಚಾಯತ್ ಬಿಜೆಪಿ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಸುಳ್ಯ ನಿರೀಕ್ಷಣಾ ಮಂದಿರದಲ್ಲಿ ಸಚಿವರನ್ನು ಭೇಟಿಯಾದ ಬಿಜೆಪಿ ಪ್ರಮುಖರು ಮನವಿ ಸಲ್ಲಿಸಿದರು.

ಕಸ ವಿಲೇವಾರಿ ಅವ್ಯವಸ್ಥೆ: ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯಿಂದ ಕಸ ವಿಲೇವಾರಿಗೆ ಸ್ಥಳ ಗುರುತಿಸಿ, ಕಸ ವಿಲೇವಾರಿ ಮಾಡದ ಕಾರಣ ನಗರದಲ್ಲಿ ತ್ಯಾಜ್ಯ ಸಮಸ್ಯೆ ತೀವ್ರಗೊಂಡಿದೆ. ಈ ಕುರಿತು ತುರ್ತು ಗಮನ ಹರಿಸಬೇಕು.

ಒಳಚರಂಡಿ ಯೋಜನೆ: ಒಳಚರಂಡಿ ಯೋಜನೆ ಅನುಷ್ಠಾನಗೊಂಡು 15 ವರ್ಷ ಕಳೆದರೂ ಅಸಮರ್ಪಕ ಮತ್ತು ಅವೈಜ್ಞಾನಿಕ ಕಾಮಗಾರಿಯಿಂದ ಒಳಚರಂಡಿ ಸಂಪರ್ಕ ಸಾಧ್ಯವಾಗಿಲ್ಲ.

ಕುಡಿಯುವ ನೀರಿನ ವ್ಯವಸ್ಥೆ:  30 ವರ್ಷಗಳ ಹಿಂದಿನ ಕುಡಿಯುವ ನೀರಿನ ಘಟಕ ವ್ಯವಸ್ಥೆ ಇದೆ. ಬೇಸಿಗೆಯಲ್ಲಿ ತಾತ್ಕಾಲಿಕ ಒಡ್ಡು ನಿರ್ಮಿಸಿ ನೀರು ಸರಬರಾಜು ಮಾಡಲಾಗುತ್ತದೆ. ಸುಳ್ಯ ನಗರಕ್ಕೆ ‌ಶಾಶ್ವತ ಕುಡಿಯುವ ನೀರಿನ ಯೋಜನೆಗೆ 64 ಕೋಟಿ ರೂ ಪ್ರಸ್ತಾವನೆ ಸಲ್ಲಿಸಿದರೂ ಮಂಜೂರಾತಿ ದೊರೆತಿಲ್ಲ. ಕೂಡಲೇ ಮಂಜೂರಾತಿ ನೀಡಬೇಕು.

ನಮೂನೆ 3ನ್ನು ನೀಡುವಾಗ ಇರುವ ಗೊಂದಲ ಪರಿಹರಿಸಬೇಕು, ಬಿಪಿಎಲ್ ಪಡಿತರ ರದ್ದತಿಯ ದಂಡ ವಸೂಲಾತಿಯನ್ನು ರದ್ದು ಮಾಡಿ ಬಿಪಿಎಲ್ ಕಾರ್ಡ್ ಸ್ವಯಂ ರದ್ದತಿಗೆ ಕಾಲಾವಕಾಶ ನೀಡಬೇಕು, ನಗರ ಪಂಚಾಯತ್ ಚುನಾವಣೆ ನಡೆದು 5 ತಿಂಗಳಾದರೂ ಅಧಿಕಾರ ಹಸ್ತಾಂತರ ಆಗಿಲ್ಲ. ಅಧಿಕಾರ ಹಸ್ತಾಂತರ ಕೂಡಲೇ ಮಾಡಬೇಕು, ಸುಳ್ಯ ತಾಲೂಕಿಗೆ ಅತೀ ಅಗತ್ಯವಾದ 110 ಕೆವಿ ಸಬ್ ಸ್ಟೇಷನ್ ಕಾಮಗಾರಿ ಕೂಡಲೇ ಅನುಷ್ಠನ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಬಿಜೆಪಿ ನಗರಾಧ್ಯಕ್ಷ ವಿಜಯಕುಮಾರ್ ಕಂದಡ್ಕ, ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಪಿ.ಕೆ.ಉಮೇಶ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಕಾರ್ಯವಾಹ ನ.ಸೀತಾರಾಮ, ಹರೀಶ್ ಬೂಡುಪನ್ನೆ, ಸೋಮನಾಥ ಪೂಜಾರಿ, ದಾಮೋದರ ಮಂಚಿ, ನಾರಾಯಣ ಶಾಂತಿನಗರ, ನ.ಪಂ.ಸದಸ್ಯರಾದ ಬಾಲಕೃಷ್ಣ ರೈ, ಸುಧಾಕರ, ಬುದ್ಧ ನಾಯ್ಕ್, ಸರೋಜಿನಿ ಪೆಲ್ತಡ್ಕ, ಕಿಶೋರಿ ಶೇಟ್, ಶಿಲ್ಪಾ ಸುದೇವ್, ಪ್ರವಿತಾ ಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

9 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

14 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

14 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

15 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

15 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

1 day ago