ಸುಳ್ಯ: ಸುಳ್ಯ ನಗರದ ಮೂಲಭೂತ ಅಭಿವೃದ್ಧಿಗೆ ಬಿಜೆಪಿ ಒತ್ತು ನೀಡಲಿದೆ ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಮೂರು ಅವಧಿಯಲ್ಲಿ ಬಿಜೆಪಿ ಆಡಳಿತದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಈ ಹಿಂದೆ ನಗರ ಪಂಚಾಯತನ್ನು ಆಡಳಿತ ನಡೆಸಿದ್ದ ಕಾಂಗ್ರೆಸ್ಸಿಗರು ಸಾರ್ವಜನಿಕ ಅಗತ್ಯತೆಗೆ ಭೂಮಿ ಕಾಯ್ದಿರಿಸುವ ಕೆಲಸ ಮಾಡಿಲ್ಲ. ಇದರಿಂದ ಘನ ತ್ಯಾಜ್ಯ ವಿಲೇವಾರಿ ಘಟಕ ಸೇರಿದಂತೆ ಹಲವು ಅಭಿವೃದ್ಧಿಗೆ ಭೂಮಿಯ ಅಲಭ್ಯತೆಯ ಸಮಸ್ಯೆ ಎದುರಾಗಿದೆ. ಸೀಮಿತ ಭೂಮಿ ಲಭ್ಯತೆಯ ಮಧ್ಯೆಯೂ ಸಾಕಷ್ಟು ಅಭಿವೃದ್ಧಿ ಮಾಡಲು ಸಾಧ್ಯವಾಗಿದೆ ಎಂದರು. ಮುಂದೆಯೂ ನಗರದ ಅಭಿವೃದ್ಧಿಗೆ ಬಿಜೆಪಿ ಆದ್ಯತೆ ನೀಡಲಿದೆ. ಕುಡಿಯುವ ನೀರು, ನಗರದ ಎಲ್ಲಾ ರಸ್ತೆಗಳ ಕಾಂಕ್ರೀಟೀಕರಣಕ್ಕೆ ಆದ್ಯೆತೆ ನೀಡಲಾಗುವುದು ಎಂದರು. ಈ ಬಾರಿ ನಗರದ ಎಲ್ಲಾ 20 ವಾರ್ಡ್‍ಗಳಲ್ಲಿಯೂ ಬಿಜೆಪಿಗೆ ಗೆಲ್ಲುವ ಅವಕಾಶ ಇದೆ. ಲೋಕಸಭಾ ಚುನಾವಣೆಯಲ್ಲಿನ ಬಿಜೆಪಿಯ ಗೆಲುವು ಮತ್ತು ಬಹುಮತ ನಿರೀಕ್ಷಿತ. ಲೋಕಸಭಾ ಚುನಾವಣೆಯ ಗೆಲುವು ನಗರ ಪಂಚಾಯಿತಿಯ ಗೆಲುವಿಗೆ ಪ್ರೇರಣೆಯಾಗಲಿದೆ ಎಂದು ಅಂಗಾರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ಹೆಗ್ಡೆ, ಸುಬೋದ್ ಶೆಟ್ಟಿ ಮೇನಾಲ, ನಗರ ಬಿಜೆಪಿ ಅಧ್ಯಕ್ಷ ಹಾಗು ನ.ಪಂ.ಅಭ್ಯರ್ಥಿವಿನಯಕುಮಾರ್ ಕಂದಡ್ಕ, ಅಭ್ಯರ್ಥಿಗಳಾದ ಹರೀಶ್ ಬೂಡುಪನ್ನೆ, ಶಶಿಕಲಾ ಎ, ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಉಪಾಧ್ಯಕ್ಷೆ ಶುಭದಾ ಎಸ್ ರೈ, ಸದಸ್ಯರಾದ ಪುಷ್ಪಾ ಮೇದಪ್ಪ, ಜಾಹ್ನವಿ ಪ್ರಮುಖರಾದ ಪಿ.ಕೆ.ಉಮೇಶ್, ಸೋಮನಾಥ ಪೂಜಾರಿ, ಗಿರೀಶ್ ಕಲ್ಲುಗದ್ದೆ, ವೇದಾವತಿ ಮಾಣಿಬೆಟ್ಟು ಉಪಸ್ಥಿತರಿದ್ದರು.
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…