ಸುಳ್ಯ: ನಗರ ಪಂಚಾಯಿತಿ ಮುಂಭಾಗದ ಕಟ್ಟಡದಲ್ಲಿ ತುಂಬಿಡಲಾಗಿರುವ ತ್ಯಾಜ್ಯವನ್ನು ನೋಡಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ನಗರ ಪಂಚಾಯಿತಿ ಅಧಿಕಾರಿಗಳನ್ನು ತೀವ್ರ ತರಾಟೆಗೆತ್ತಿಕೊಂಡ ಘಟನೆ ನಡೆಯಿತು.
ಶುಕ್ರವಾರ ಸುಳ್ಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಗರ ಪಂಚಾಯಿತಿಯ ಮುಂಭಾಗದ ಕಟ್ಟಡದಲ್ಲಿ ಮತ್ತು ಹಿಂಭಾಗದಲ್ಲಿ ಸುರಿಯಲಾಗಿರುವ ತ್ಯಾಜ್ಯ ರಾಶಿಯನ್ನು ವೀಕ್ಷಿಸಿದರು. ಇಲ್ಲಿ ತುಂಬಿಡಲಾಗಿರುವ ಕಸವನ್ನು ಬೇರ್ಪಡಿಸಿ ವಿಲೇವಾರಿ ಮಾಡಬೇಕು ಎಂದು ಅವರು ಸೂಚಿಸಿದರು. ಎಷ್ಟು ವಿಧದಲ್ಲಿ ಬೇರ್ಪಡಿಸಲು ಸಾಧ್ಯವೋ ಅಷ್ಟು ವಿಧದಲ್ಲಿ ಬೇರ್ಪಡಿಸಬೇಕು. ಅದನ್ನು ಎಷ್ಟು ಮರು ಬಳಕೆಗೆ ಸಾಧ್ಯವೋ ಅಷ್ಟನ್ನು ಮಾರಾಟ ಮಾಡಿ ನಗರ ಪಂಚಾಯತ್‍ಗೆ ಆದಾಯ ಬರುವಂತಾಗಬೇಕು. ಒಂದು ವಾರದಲ್ಲಿ ತ್ಯಾಜ್ಯವನ್ನು ಸಂಪೂರ್ಣ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು. ಕೂಡಲೇ ಕಸ ಬೇರ್ಪಡಿಸುವ ಕಾರ್ಯ ಆರಂಭಿಸಬೇಕು. ಪ್ರತಿ ದಿನ ಕಸ ವಿಲೇವಾರಿ ಮಾಡಿದ ಪ್ರಗತಿಯ ಬಗ್ಗೆ ವರದಿಯನ್ನು ಪೋಟೋ ಸಮೇತ ಸಲ್ಲಿಸಬೇಕು ಎಂದು ಅವರು ಸೂಚಿಸಿದರು.
ಕಸ ವಿಲೇವಾರಿಗೆ ಸೂಚನೆ ನೀಡಿದರೂ ಪಾಲಿಸುತ್ತಿಲ್ಲ. ತ್ಯಾಜ್ಯ ನಿರ್ವಹಣೆ ಸರಿಯಾಗಿಲ್ಲದ ಕಾರಣ ತೀವ್ರ ಸಮಸ್ಯೆ ಸೃಷ್ಠಿಸಿದೆ ಎಂದು ನಗರ ಪಂಚಾಯಿತಿ ಆಡಳಿತಾಧಿಕಾರಿ, ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಹಾಗು ನಗರ ಪಂಚಾಯಿತಿ ಸದಸ್ಯರು ಜಿಲ್ಲಾಧಿಕಾರಿಯವರ ಗಮನಕ್ಕೆ ತಂದರು. ಈ ಕುರಿತು ಕೂಲಂಕುಷವಾಗಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಎಲ್ಲಾ ತ್ಯಾಜ್ಯವನ್ನು ವಾರದಲ್ಲಿ ವಿಲೇವಾರಿ ಮಾಡಿ ವರದಿ ನೀಡುವಂತೆ ಮುಖ್ಯಾಧಿಕಾರಿ ಆದೇಶ ನೀಡಿದರು. ಸುಳ್ಯ ತಾಲೂಕು ಕಚೇರಿಗೆ ಆಗಮಿಸಿದ ಜಿಲ್ಲಾಧಿಕಾರಿಯವರಿಗೆ ತಹಶೀಲ್ದಾರ್ ಕುಂಞ ಅಹಮ್ಮದ್ ಸುಳ್ಯ ನಗರದ ತ್ಯಾಜ್ಯ ವಿಲೇವಾರಿಯಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ವಿವರಿಸಿದ್ದರು. ಈ ಹಿನ್ನಲೆಯಲ್ಲಿ ಅವರು ನಗರ ಪಂಚಾಯಿತಿಗೆ ಆಗಮಿಸಿ ತ್ಯಾಜ್ಯ ವಿಲೇವಾರಿಯ ಅವ್ಯವಸ್ಥೆಯನ್ನು ವೀಕ್ಷಿಸಿದರು.
ಪ್ರತಿದಿನದ ತ್ಯಾಜ್ಯವನ್ನು ಹಸಿ ಕಸ, ಒಣಕಸ ಎಂದು ಬೇರ್ಪಡಿಸಿ ಸಂಗ್ರಹಿಸಬೇಕು ಮತ್ತು ಅದೇ ದಿನದ ಕಸವನ್ನು ಅದೇ ದಿನ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ನ.ಪಂ. ಮುಖ್ಯಾಧಿಕಾರಿಗೆ ಮತ್ತಡಿ ಅವರಿಗೆ ಖಡಕ್ ಆಗಿ ಆದೇಶ ನೀಡಿದರು. ಕಸ ವಿಲೇವಾರಿ ನಡೆಸಲು ಬರ್ನಿಂಗ್ ಮೆಷಿನ್ ಖರೀದಿಸಲು ಅನುಮೋದನೆ ನೀಡುವುದಾಗಿ ಅವರು ತಿಳಿಸಿದರು.
ನಗರ ಪಂಚಾಯಿತಿ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಬಾಲಕೃಷ್ಣ ರೈ, ಸುಧಾಕರ, ವಾಣಿಶ್ರೀ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…