ಸುಳ್ಯ: ಸುಳ್ಯ ನಗರ ಪಂಚಾಯತ್ ಕಚೇರಿ ಸಮೀಪದ ಕಟ್ಟಡದಲ್ಲಿ ತುಂಬಿಡಲಾಗಿರುವ ತ್ಯಾಜ್ಯ ವಿಲೇವಾರಿಗೆ ಕ್ರಮ ಆರಂಭವಾಗಿದೆ. ನಗರದಲ್ಲಿ ಸಂಗ್ರಹವಾಗುವ ಹಸಿ ಕಸವನ್ನು ಗೊಬ್ಬರ ತಯಾರಿಗೆ ಕಳುಹಿಸಲಾಗುತ್ತದೆ. ಆದರೆ ಒಣ ಕಸವನ್ನು ನಗರ ಪಂಚಾಯತ್ ಕಚೇರಿ ಬಳಿಯ ಕಟ್ಟಡದಲ್ಲಿ ತುಂಬಿಡುವುದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರೇ ಸ್ಥಳಕ್ಕೆ ಆಗಮಿಸಿ ಕಸವನ್ನು ತೆರವು ಮಾಡಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ಕಸವನ್ನು ಇಲ್ಲಿಂದ ತೆರವು ಮಾಡಲಾಗುತಿದೆ. ಇಲ್ಲಿಂದ ಕಸವನ್ನು ಲಾರಿಯಲ್ಲಿ ತುಂಬಿ ಬೇರೆ ಕಡೆಗೆ ಸಾಗಿಸಿ ವಿಲೇವಾರಿ ಮಾಡಲಾಗುತಿದೆ ಎಂದು ನಗರ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ಕಸವನ್ನು ನಗರ ಪಂಚಾಯತ್ ಕಚೇರಿ ಸಮೀಪವೇ ತುಂಬಿಡುವುದರಿಂದ ದುರ್ನಾತ ಬೀರುತ್ತಿತ್ತು. ಇದು ಭಾರೀ ವಿವಾದಕ್ಕೂ ಕಾರಣವಾಗಿತ್ತು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement