ಸುಳ್ಯ: ಹಳೆಯ ಜಾಕ್ ವೆಲ್ ಮತ್ತು ಪೈಪ್ ಲೈನ್‍ಗಳಿಂದಾಗಿ ಸುಳ್ಯ ನಗರದ ವಿವಿಧ ವಾರ್ಡ್‍ಗಳಿಗೆ ನೀರು ಸರಬರಾಜಿಗೆ ತೊಂದರೆ ಆಗುತಿದೆ. ಆದುದರಿಂದ ಹಳೆಯ ಜಾಕ್ ವೆಲ್ ಮತ್ತು ಪೈಪ್ ಲೈನ್ ಬದಲಾವಣೆಗೆ 1.75 ಕೋಟಿ ಯೋಜನೆ ರೂಪಿಸಲಾಗಿದೆ ಎಂದು ನಗರ ಪಂಚಾಯತ್ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ತಿಳಿಸಿದ್ದಾರೆ. ನಗರೋತ್ಥಾನ ಯೋಜನೆಯಲ್ಲಿ ಬಂದ ಅನುದಾನವನ್ನು ಇದಕ್ಕಾಗಿ ವಿನಿಯೋಗಿಸಲಾಗುವುದು. ಕರ್ನಾಟಕ ಒಳಚರಂಡಿ ಮಂಡಳಿ ಕಾಮಗಾರಿ ನಿರ್ವಹಿಸಲಿದ್ದು ಟೆಂಡರ್ ನಡೆಯಬೇಕಾಗಿದೆ ಎಂದು ತಿಳಿಸಿದರು.
ನಗರ ಪಂಚಾಯತ್ ನ ಬೋರುಗುಡ್ಡೆ ವಾರ್ಡ್‍ನಲ್ಲಿ ಕಳೆದ ಎರಡು ವಾರಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ ಎಂದು ನಗರ ಪಂಚಾಯತ್ ಸದಸ್ಯ ಕೆ.ಎಸ್.ಉಮ್ಮರ್ ನಗರ ಪಂಚಾಯತ್‍ಗೆ ಆಗಮಿಸಿ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ತೀವ್ರ ತರಾಟೆಗೆತ್ತಿಕೊಂಡ ಘಟನೆಯ ಹಿನ್ನಲೆಯಲ್ಲಿ ಮುಖ್ಯಾಧಿಕಾರಿ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿವರ ನೀಡಿದರು.
ಶುದ್ದೀಕರಣ ಘಟಕಕ್ಕೆ 1.25 ಕೋಟಿ
ನಗರ ಪಂಚಾಯತ್ ನ ಕುಡಿಯುವ ನೀರು ಸರಬರಾಜು ಮಾಡುವ ಶುದ್ದೀಕರಣ ಘಟಕ ಹಳೆಯದಾಗಿದೆ. ಇದರ ನವೀಕರಣಕ್ಕೆ 1.25 ಕೋಟಿಯ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಮುಖ್ಯಾಧಿಕಾರಿ ಶ್ರೀಧರ್ ತಿಳಿಸಿದರು. ಈಗ 50 ಹೆಚ್.ಪಿ.ಯ ಎರಡು ಪಂಪ್‍ಗಳಲ್ಲಿ ನೀರು ಪಂಪಿಂಗ್ ಮಾಡಿದರೆ ಸಮರ್ಪಕವಾಗಿ ನೀರು ಶುದ್ದೀಕರಿಸಲು ಸಾಧ್ಯವಾಗುತ್ತಿಲ್ಲ. ಆದುದರಿಂದ ಶುದ್ಧೀಕರಣ ಘಟಕದ ನವೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಪ್ರಸ್ತಾವನೆ ತಯಾರಿಸಿ ಅನುಮೋದನೆಗಾಗಿ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಅವರು ಪತ್ರಕರ್ತರಿಗೆ ಮಾಹಿತಿ ನೀಡಿದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…