ಸುಳ್ಯ: ಸಶಕ್ತವಾದ ದೇಹದಲ್ಲಿ ಸಶಕ್ತವಾದ ಮನಸ್ಸು ಇರುತ್ತದೆ. ಮನಸ್ಸು ಮತ್ತು ಶರೀರಕ್ಕೆ ಪರಿಶ್ರಮ ಮತ್ತು ವ್ಯಾಯಾಮ ಅಗತ್ಯ. ಬಲಿಷ್ಠ ಮನಸ್ಸಿನ ಮೂಲಕ ವಿದ್ಯಾರ್ಜನೆ ಮಾಡಿದಾಗ ಅದು ಫಲಿಸುತ್ತದೆ ಎಂದು ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಉದಯ ಕೃಷ್ಣ ಬಿ. ಅವರು ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಜರುಗಿದ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಕರ್ತವ್ಯ ಪ್ರಜ್ಞೆಯೊಂದಿಗೆ ವಿದ್ಯಾರ್ಥಿಗಳು ಛಲವನ್ನು ಹೊಂದಿ ಕನಸು ಈಡೇರಿಸುವ ಜವಾಬ್ದಾರಿ ಹೊಂದಬೇಕು ಎಂದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಅವರು ಮಾತನಾಡಿ ನಾವು ಎಷ್ಟೇ ಓದಿದರೂ, ಆರ್ಥಿಕ ಮಟ್ಟ ಎಷ್ಟೇ ಇತ್ತರಕ್ಕೆ ಏರಿದರೂ ಸಂಸ್ಕಾರಯುತವಾಗಿ ಬಾಳಬೇಕು. ಮಾನವೀಯ ಗುಣಗಳನ್ನು ಮೈಗೂಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ, ಬದುಕಿನಲ್ಲಿ ಮೇಲ್ಮುಖವಾಗಿ ನಡೆಯಲು ಇಚ್ಚಾಶಕ್ತಿ ಮತ್ತು ಕ್ರಿಯಾಶಕ್ತಿಯ ಸಮನ್ವಯತೆ ಬಹಳ ಮುಖ್ಯ. ಸೋಲು – ಗೆಲುವು ಶಾಶ್ವತವಲ್ಲ ಎಂಬ ಸತ್ಯದ ಅರಿವಿನೊಡನೆ ಮುನ್ನಡೆಯಿರಿ. ಅವಕಾಶಗಳನ್ನು ಉತ್ತಮ ಅಭಿಲಾಷೆಯೊಂದಿಗೆ ನಿಮ್ಮದಾಗಿಸಿಕೊಳ್ಳಿ ಮತ್ತು ಈ ದೇಶದ ಉತ್ತಮ ನಾಗರಿಕರಾಗಿ ಬಾಳಿ ಎಂದು ನುಡಿದರು.
ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್ ಅವರು ಉಪಸ್ಥಿತರಿದ್ದರು. ಕಾಲೇಜಿನ ಹಿಂದಿ ಉಪನ್ಯಾಸಕಿ ರಾಜೇಶ್ವರಿ ಸ್ವಾಗತಿಸಿ, ರಸಾಯನ ಶಾಸ್ತ್ರ ಉಪನ್ಯಾಸಕಿ ರತ್ನಾವತಿ ವಂದಿಸಿದರು. ಬಹುಮಾನ ವಿತರಣೆಯ ಪಟ್ಟಿಯನ್ನು ಉಪನ್ಯಾಸಕರಾದ ಕಿಶೋರ್ ಕುಮಾರ್ ಮತ್ತು ಹರೀಶ್ ವಾಚಿಸಿದರು. ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಅವರು ನಿರ್ವಹಿಸಿದರು.
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …
ಬೇಸಿಗೆಯಲ್ಲಿ ಈ ಬಾರಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್…