ಸುಳ್ಯ: ಹಿಂದಿ ಭಾಷೆ ಸಂಸ್ಕೃತಿಯ ಒಂದು ಭಾಗವಾಗಿ ಪ್ರಪಂಚದಲ್ಲಿ ವಿಸ್ತಾರವಾಗಿ ಹಬ್ಬಿದ್ದು ಅದನ್ನು ಬೆಳೆಸುವಲ್ಲಿ ನಾವು ಪ್ರಮುಖ ಪಾತ್ರ ವಹಿಸಬೇಕೆಂದು ಎಂದು ಮೇಧಾ ಕಾಲೇಜಿನ ಉಪನ್ಯಾಸಕಿ ಪ್ರಫುಲ್ಲ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಹಿಂದಿ ದಿನಾಚರಣೆಯಲ್ಲಿ ಅತಿಥಿಯಾಗಿ ಆಗಮಿಸಿ ಮಾತನಾಡುತ್ತಿದ್ದರು. ಭಾಷೆಯನ್ನು ಕಲಿತು ಮಾತನಾಡಿದಾಗ ಮಾತ್ರ ಭಾಷೆಯ ಸಮೃದ್ಧತೆ ಹೆಚ್ಚತ್ತದೆ ಎಂದು ಹೇಳಿದರು. ಕಾಲೇಜಿನ ಹಿಂದಿ ಉಪನ್ಯಾಸಕಿ ರಾಜೇಶ್ವರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು ಹರಿಣಿ ಪುತ್ತೂರಾಯ ಮಾತನಾಡಿ ರಾಷ್ಟ್ರ ಭಾಷೆ ಹಿಂದಿಯ ಘನತೆ, ಗೌರವ ವನ್ನು ದೇಶೀ ಸಂಸ್ಕತಿಯಲ್ಲಿ ಅಳವಡಿಸಿಕೊಂಡಾಗ ಭಾಷೆ ಶ್ರೀಮಂತವಾಗುತ್ತದೆ ಎಂದರು.
ವಿದ್ಯಾರ್ಥಿಗಳಾದ ಅನೀಶ್ ಸ್ವಾಗತಿಸಿ, ಮೋಕ್ಷಿತ್ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಆಕಾಂಕ್ಷ ಮತ್ತು ಪೂಜಾ ನಿರ್ವಹಿಸಿದರು. ವಿದ್ಯಾರ್ಥಿಗಳು ಹಿಂದಿ ಸಮೂಹ ಗೀತೆ , ಭಾಷಣ ಮುಂತಾದುವುಗಳನ್ನು ನಡೆಸಿಕೊಟ್ಟರು
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…