ಸುಳ್ಯ: ನ ಪಂ ಚುನಾವಣಾ ಮತ ಎಣಿಕೆ ಮುಗಿದಿದೆ. ಬಿಜೆಪಿ ಅಭ್ಯರ್ಥಿಗಳು 14 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಬಹುಮತದೊಂದಿಗೆ ನಗರ ಪಂಚಾಯತ್ ಅಧಿಕಾರವನ್ನು ಸತತ 4 ನೇ ಬಾರಿಗೆ ಪಡೆದುಕೊಂಡಿದೆ. ಹೀಗಾಗಿ ಬಿಜೆಪಿ ಕಾರ್ಯಕರ್ತರು ಸಂಭ್ರಮದಲ್ಲಿದ್ದಾರೆ. ಸಂತಸವನ್ನು ಹಂಚಿಕೊಳ್ಳುತ್ತಿದ್ದಾರೆ.
ಮತ ಎಣಿಕೆ ಕೇಂದ್ರವಾದ ಸುಳ್ಯ ನೆಹರೂ ಸ್ಮಾರಕ ಕಾಲೇಜಿನ ಮುಂಭಾಗದಲ್ಲಿ ಎಲ್ಲಾ ಪಕ್ಷಗಳ ಕಾರ್ಯಕರ್ತರು ಆಗಮಿಸಿದ್ದರು. ಮತ ಎಣಿಕೆ ಮುಗಿಯುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು. ಈ ಬಾರಿ ಹೊಸಮುಖಗಳಿಗೆ ಬಿಜೆಪಿ ಟಿಕೆಟ್ ನೀಡಿ ಹೊಸದೊಂದು ಪ್ರಯೋಗ ಮಾಡಿತ್ತು . ಇದರಲ್ಲಿ ಯಶಸ್ಸು ಕಂಡಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ :
ಆದರೆ ರಾಜ್ಯದಲ್ಲಿ ಒಟ್ಟು ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಒಟ್ಟು 61 ನಗರ ಸ್ಥಳೀಯ ಸಂಸ್ಥೆಗಳಿಗೆ ಮೇ 29 ರಂದು ನಡೆದ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ನಗರಸಭೆಯ 217 ವಾರ್ಡ್ ಗಳಲ್ಲಿ ಬಿಜೆಪಿ 28, ಕಾಂಗ್ರೆಸ್ 41, ಜೆಡಿಎಸ್ 21, ಇತರರು 16ರಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪುರಸಭೆಯ 717 ವಾರ್ಡ್ ಗಳಲ್ಲಿ 119 ರಲ್ಲಿ ಬಿಜೆಪಿ, 251ರಲ್ಲಿ ಕಾಂಗ್ರೆಸ್ ಮತ್ತು 75 ಜೆಡಿಎಸ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪಟ್ಟಣ ಪಂಚಾಯತ್ ನ 290 ವಾರ್ಡ್ ಗಳಲ್ಲಿ 117 ರಲ್ಲಿ ಬಿಜೆಪಿ, 78 ರಲ್ಲಿ ಕಾಂಗ್ರೆಸ್, 27 ರಲ್ಲಿ ಜೆಡಿಎಸ್ ಮತ್ತು ಇತರರು 29 ರಲ್ಲಿ ಮುನ್ನಡೆ ಸಾಧಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 4360 ಮಂದಿ ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ 1125 ಮಂದಿ, ಬಿಜೆಪಿಯಿಂದ 1125 ಮಂದಿ , ಜೆಡಿಎಸ್ ನಿಂದ 780 ಮಂದಿ ಕಣದಲ್ಲಿದ್ದಾರೆ.ಪಕ್ಷೇತರರಾಗಿ 1056 ಮಂದಿ ಕಣದಲ್ಲಿ ಇದ್ದಾರೆ.
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಸೆಪ್ಟೆಂಬರ್ 28–29ರಿಂದ ಹಲವು ಭಾಗಗಳಲ್ಲಿ ಮತ್ತೆ…
ತ್ರಿಪುರಾದಲ್ಲಿ ರಬ್ಬರ್ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…
ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…
₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್ 18 ಪ್ರೊ ಖರೀದಿಗಾಗಿ ದೇಶದ ಹಲವು…