Advertisement
ಸುದ್ದಿಗಳು

ಸುಳ್ಯ ನ.ಪಂ.ಚುನಾವಣೆಯಲ್ಲಿ ಮೈತ್ರಿ ಸಂಭವ : ಜೆಡಿಎಸ್ ಮೂರು ಕಡೆ ಸ್ಪರ್ಧೆ ?

Share

*ಸ್ಪೆಷಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ

ಸುಳ್ಯ: ರಾಜ್ಯ ಸರಕಾರದ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿಯೂ ಮೈತ್ರಿ ಏರ್ಪಡುವ ಸಂಭವ ಇದೆ‌. ಈ ಕುರಿತು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಮಧ್ಯೆ ಒಂದು ಹಂತದ ಮಾತುಕತೆ ನಡೆದಿದೆ. ಮೂರು ವಾರ್ಡ್ ಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಮಧ್ಯೆ ನಡೆದ ಚರ್ಚೆಯಲ್ಲಿ ಜಯನಗರ, ಶಾಂತಿನಗರ, ನಾವೂರು ವಾರ್ಡ್ ಗಳನ್ನು ಬಿಟ್ಟು ಕೊಡಬೇಕು ಎಂದು ಜೆಡಿಎಸ್ ಮುಖಂಡರು ಬೇಡಿಕೆ ಇಟ್ಟಿದ್ದಾರೆ. ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿ. ನಾಮಪತ್ರ ಹಿಂಪಡೆಯುವ ಅವಧಿ ಮುಗಿಯುವುದರೊಳಗೆ ಚರ್ಚೆ ನಡೆಸಿ ವಾರ್ಡ್ ಗಳನ್ನು ಹಂಚಿಕೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಎಂಬ ಸಲಹೆಯನ್ನು ಕಾಂಗ್ರೆಸ್ ಮುಖಂಡರು ಮುಂದಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಇಳಿಸಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.  ಆದರೆ ಜಯನಗರ ಮತ್ತು ಶಾಂತಿನಗರ ವಾರ್ಡ್ ಗಳಲ್ಲಿ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದ್ದಾರೆ. ನಾವೂರು ವಾರ್ಡ್ ನಲ್ಲಿ ಕಾಂಗ್ರೆಸ್ ನ ಪ್ರಮುಖರು ಅಭ್ಯರ್ಥಿಯಾಗಲು ರೇಸ್ ನಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಮೈತ್ರಿ ಉಂಟಾದಲ್ಲಿ ಯಾವ ರೀತಿಯ ಬದಲಾವಣೆ ಆಗಲಿದೆ ಎಂಬ ಕುತೂಹಲ ಮೂಡಿದೆ.

ಕಳೆದ ಅವಧಿಗಿಂತ ಮೊದಲು ನಗರ ಪಂಚಾಯತ್ ನಲ್ಲಿ ಜೆಡಿಎಸ್ ಸದಸ್ಯರು ಇದ್ದರು. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿಯೇ ಸ್ಪರ್ಧೆಗೆ ಇಳಿಯುತ್ತಿತ್ತು. ಈಗ ರಾಜ್ಯದಲ್ಲಿ ಉಂಟಾಗಿರುವ ಮೈತ್ರಿಯ ಹಿನ್ನಲೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿಯೂ ಬಿಜೆಪಿಯನ್ನು ಎದುರಿಸಲು ಎರಡೂ ಪಕ್ಷಗಳು ಕೈ ಜೋಡಿಸಲಿದೆ ಎಂದು ಹೇಳಲಾಗಿದೆ. ಲೋಕಸಭಾ ಚುನಾವಣೆಯಲ್ಲಿಯೂ ಎರಡೂ ಪಕ್ಷಗಳು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

5 minutes ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

10 minutes ago

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

22 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

1 day ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

2 days ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

2 days ago