ಸುಳ್ಯ ನ.ಪಂ.ಚುನಾವಣೆ ಕಾವೇರುತ್ತಿದ್ದಂತೆ ಲೋಕ ಫಲಿತಾಂಶದ ಕುತೂಹಲ…!

May 22, 2019
10:10 PM

ಸುಳ್ಯ‌: ಲೋಕಸಭಾ ಸಭಾ ಚುನಾವಣೆಯ ಬಿಸಿ ತಣ್ಣಗಾಗುತ್ತಿದ್ದಂತೆ ಸುಳ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯ ಕಾವು ಆರಂಭಗೊಂಡಿತ್ತು. ಇದೀಗ ನಗರ ಪಂಚಾ ಯತ್ ಚುನಾವಣೆಯ ಪ್ರಚಾರದ ಕಾವು ಏರುತ್ತಿದ್ದಂತೆ  ಲೋಕಸಭಾ ಚುನಾವಣೆಯ ಫಲಿತಾಂಶದ ಕುತೂಹಲ ಹೆಚ್ಚಿದೆ.

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸ್ಪರ್ಧೆ ಏರ್ಪಟ್ಟಿತು. ಸುಳ್ಯ ನಗರ ಪಂಚಾಯತ್ ಚುನಾವಣಾ ರಂಗದಲ್ಲಿಯೂ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳೇ ನೇರ ಎದುರಾಳಿಗಳು. ಆದುದರಿಂದ ನ.ಪಂ.ಚುನಾವಣೆಯ ಬಿಝಿಯ ಮಧ್ಯೆಯೂ ಲೋಕಸಭಾ ಫಲಿತಾಂಶದ ಮೇಲೆ ಎರಡೂ ಪಕ್ಷಗಳು ಕಣ್ಣಿಟ್ಟಿದೆ. ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವ ಪಕ್ಷಕ್ಕೆ ನ.ಪಂ.ಚುನಾವಣಾ ಪ್ರಚಾರಕ್ಕೆ ಟಾನಿಕ್ ಸಿಕ್ಕಿದಂತಾದರೆ, ಸೋಲುವ ಪಕ್ಷಗಳಿಗೆ ಇನ್ನಷ್ಟು ಜಾಗೃತರಾಗುವ ಮತ್ತು ಪ್ರಚಾರ ತಂತ್ರವನ್ನು ಬದಲಿಸಿ ಕಣದಲ್ಲಿ ಮುಂದುವರಿಯುವ ಅವಕಾಶ ಸಿಕ್ಕಿದಂತಾಗುತ್ತದೆ. ಹೀಗೆ ಲೋಕ ಫಲಿತಾಂಶ ಸ್ಥಳೀಯ ಸಂಸ್ಥೆ ಚುನಾವಾಣಾ ಪ್ರಚಾರದಲ್ಲಿಯೂ ಪ್ರತಿಫಲಿಸಲಿದೆಯೇ ಎಂಬ ಕುತೂಹಲ ಮೂಡಿದೆ. ನಗರದಲ್ಲಿ ಎಷ್ಟು ಲೀಡ್ ಸಿಕ್ಕಿದೆ ಎನ್ನುವುದು  ಸ್ಥಳೀಯ ಸಂಸ್ಥೆಯ ಚುನಾವಣೆಗೆ ದಿಕ್ಸೂಚಿಯಾಗದೇ ಇದ್ದರೂ ಕೊಂಚ ಪ್ರಭಾವ, ಪರಿಣಾಮವಾಗಬಹುದು ಎಂದು ವಿಶ್ಲೇಷಿಸಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror