ಸುಳ್ಯ: 41 ವರ್ಷಗಳಷ್ಟು ಕಾಲ ಸುಳ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಬಿ. ಬಾಲಕೃಷ್ಣರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಸುಳ್ಯ ಸಿ.ಎ. ಬ್ಯಾಂಕ್ ಸಭಾ ಭವನದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷ ಹರೀಶ್ ಕಂಜಿಪಿಲಿ ವಹಿಸಿದ್ದರು. ಬ್ಯಾಂಕಿನ ಮಾಜಿ ಅಧ್ಯಕ್ಷ ಜಾಕೆ ಮಾಧವ ಗೌಡ ಬಾಲಕೃಷ್ಣ ಮತ್ತು ಕುಸುಮಾವತಿ ದಂಪತಿಗಳನ್ನು ಸನ್ಮಾನಿಸಿದರು. ಕೋಶಾಧಿಕಾರಿ ಬಿ.ಎಸ್.ವಿಶ್ವನಾಥ, ಮಾಜಿ ಅಧ್ಯಕ್ಷ ಪಿ.ಕೆ. ಉಮೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಿಬ್ಬಂದಿಗಳಾದ ದಿನೇಶ್ ಎಂ.ಎಸ್. ದಾಮೋದರ, ಚಂದ್ರಾವತಿ, ನಿವೃತ್ತ ವ್ಯವಸ್ಥಾಪಕ ಶೀನಪ್ಪ ಗೌಡ, ಪುತ್ತೂರು ಪಿ.ಎಲ್.ಡಿ. ಬ್ಯಾಂಕ್ ನಿವೃತ್ತ ಮ್ಯಾನೇಜರ್ ಯಶೋಧರ ಜೈನ್, ಬ್ಯಾಂಕಿನ ಮಾಜಿ ನಿರ್ದೇಶಕ ಶ್ರೀಪತಿ ಭಟ್ ಮಾತನಾಡಿದರು. ಅಶ್ವಿತ್ ಹೆಚ್ ಸನ್ಮಾನ ಪತ್ರ ವಾಚಿಸಿದರು.
ಲತಾ ಪ್ರಾರ್ಥಿಸಿ, ಕ್ಷೇತ್ರಾಧಿಕಾರಿ ಮತ್ತು ಪ್ರಭಾರ ವ್ಯವಸ್ಥಾಪಕರಾದ ಕೆ.ಸಿ. ಧನರಾಜ್ ಸ್ವಾಗತಿಸಿದರು. ಸಿಬ್ಬಂದಿ ಲೋಹಿತ್ ಮಾವಿನಗೊಡ್ಲು ಕಾರ್ಯಕ್ರಮ ನಿರೂಪಿಸಿ, ಬ್ಯಾಂಕಿನ ಉಪಾಧ್ಯಕ್ಷ ಪಿ.ವೇಣುಗೋಪಾಲ ವಂದಿಸಿದರು. ಬ್ಯಾಂಕಿನ ಸಿಬ್ಬಂದಿ ವರ್ಗದವರು, ನಿರ್ದೇಶಕರು, ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…