ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ನವೀನ್ ಚಂದ್ರ ಜೋಗಿ ಅಧಿಕಾರ ಸ್ವೀಕಾರ – ಸತೀಶ್ ಕುಮಾರ್ ರಿಗೆ ಬೀಳ್ಕೊಡುಗೆ

November 29, 2019
9:48 PM

ಸುಳ್ಯ: ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ನವೀನ್ ಚಂದ್ರ ಜೋಗಿ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಸುಳ್ಯ ವೃತ್ತ ನಿರೀಕ್ಷಕ ಆರ್.ಸತೀಶ್ ಕುಮಾರ್ ಅಧಿಕಾರ ಹಸ್ತಾಂತರಿಸಿದ್ದಾರೆ.

Advertisement
Advertisement

2.8 ವರ್ಷಗಳ ಕಾಲ ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ಸತೀಶ್ ಕುಮಾರ್ ಅವರಿಗೆ ಬೆಂಗಳೂರು ಪೊಲೀಸ್ ಪ್ರಧಾನ ಕಚೇರಿಗೆ ವರ್ಗಾವಣೆಯಾಗಿದೆ. ನೂತನ ವೃತ್ತ ನಿರೀಕ್ಷಕರಾಗಿ ರಾಜ್ಯ ಗುಪ್ತವಾರ್ತೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ನವೀನ್ ಚಂದ್ರ ಜೋಗಿ ಆಗಮಿಸಿದ್ದಾರೆ. ಉಡುಪಿ ಜಿಲ್ಲೆಯ ಕಾಪು ಮೂಲದವರಾದ ನವೀನ್ ಚಂದ್ರ ಜೋಗಿ ಅವರು ಈ ಹಿಂದೆ ಲೋಕಾಯುಕ್ತ, ರಾಜ್ಯ ಗುಪ್ತ ವಾರ್ತೆ,ಉಡುಪಿ ನಗರ ವೃತ್ತಗಳಲ್ಲಿ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ್ದರು.  ನೂತನ ವೃತ್ತ ನಿರೀಕ್ಷಕರು ಅಧಿಕಾರ ವಹಿಸುವ ಸಂದರ್ಭದಲ್ಲಿ ಸುಳ್ಯ ಆರಕ್ಷಕ ಉಪನಿರೀಕ್ಷಕ ಎಂ.ಆರ್.ಹರೀಶ್, ಅಪರಾಧ ಪತ್ತೆ ವಿಭಾಗದ ಎಸ್.ಐ ರತ್ನಕುಮಾರ್, ಪ್ರೊಬೇಷನರಿ ಎಸ್.ಐ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.

ಸನ್ಮಾನ, ಬೀಳ್ಕೊಡುಗೆ: ಸುಳ್ಯದಿಂದ ವರ್ಗಾವಣೆಯಾಗಿರುವ ವೃತ್ತ ನಿರೀಕ್ಷಕ ಸತೀಶ್ ಕುಮಾರ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಎಡಿಷನಲ್ ಎಸ್ ಪಿ ವಿಕ್ರಂ ಆಮ್ಟೆ ಸನ್ಮಾನ ನೆರವೇರಿಸಿದರು. ಡಿವೈಎಸ್ ಪಿ ದಿನಕರ ಶೆಟ್ಟಿ, ನೂತನ ಸಿಐ ನವೀನ್ ಚಂದ್ರ ಜೋಗಿ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಸುಳ್ಯದಲ್ಲಿ ತನ್ನ ಕರ್ತವ್ಯದ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಸತೀಶ್ ಕುಮಾರ್ ಕೃತಜ್ಞತೆ ಸಲ್ಲಿಸಿದರು.

Advertisement

ಸತೀಶ್ ಕುಮಾರ್ ಸುದೀರ್ಘ ಸೇವೆ: ಸುಳ್ಯ ವೃತ್ತ ನಿರೀಕ್ಷಕರಾಗಿ 2.8 ವರ್ಷಗಳ ಸುದೀರ್ಘ ಕಾಲ ಕರ್ತವ್ಯ ನಿರ್ವಹಿಸಿದ್ದ ಆರ್.ಸತೀಶ್ ಕುಮಾರ್ ಜನಪರ ಅಧಿಕಾರಿ ಎಂದು ಹೆಸರು ಗಳಿಸಿದ್ದರು. ಸುಳ್ಯದಲ್ಲಿ ಸಿಐ ಆಗಿ ದೀರ್ಘ ಕಾಲ ಸೇವೆ ಸಲ್ಲಿಸಿದವರಲ್ಲಿ ಸತೀಶ್ ಕುಮಾರ್ ಎರಡನೆಯವರಾಗಿದ್ದಾರೆ. ಎಲ್ಲರೊಂದಿಗೂ ಆತ್ಮೀಯರಾಗಿ ಬೆರೆಯುತ್ತಿದ್ದ ಅವರು ರಾಜ್ಯ ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯನ್ನು ಯಶಸ್ವಿಯಾಗಿ ನೀಭಾಯಿಸಿದ್ದರು. ಸುಳ್ಯ, ಬೆಳ್ಳಾರೆ, ಸುಬ್ರಹ್ಮಣ್ಯ ಠಾಣೆಗಳನ್ನೊಳಗೊಂಡ ಸುಳ್ಯ ವೃತ್ತದ ನಿರೀಕ್ಷಕರಾಗಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಒತ್ತು ನೀಡಿದ್ದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ
May 29, 2025
2:42 PM
by: ಸಾಯಿಶೇಖರ್ ಕರಿಕಳ
ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ
May 29, 2025
7:40 AM
by: The Rural Mirror ಸುದ್ದಿಜಾಲ
ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|
May 29, 2025
7:37 AM
by: ದ ರೂರಲ್ ಮಿರರ್.ಕಾಂ
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group