ಸುಳ್ಯ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ನ (ಎಸ್.ಕೆ.ಪಿ.ಎ)ಜಿಲ್ಲಾ ವಾರ್ಷಿಕ ಕ್ರೀಡಾಕೂಟ ಆ.18 ರಂದು ಸುಳ್ಯ ಮಹಾತ್ಮಾ ಗಾಂಧಿ ಮಲ್ನಾಡ್ ಹೈಸ್ಕೂಲ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಅಸೋಸಿಯೇಷನ್ ನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲೋಕೇಶ್ ಸುಬ್ರಹ್ಮಣ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅಸೋಸಿಯೇಶನ್ ನ ಸುಳ್ಯ ವಲಯದ ಆಶ್ರಯದಲ್ಲಿ ನಡೆಯುವ ಈ ಮುಂಗಾರು ಕ್ರೀಡಾಕೂಟವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟಿಸುವರು. ಎಸ್.ಕೆ.ಪಿ.ಎ ಅಧ್ಯಕ್ಷ ವಿಲ್ಸನ್ ಗೋನ್ಸಾಲ್ವಿಸ್ ಅಧ್ಯಕ್ಷತೆ ವಹಿಸುವರು. ಶಾಸಕ ಎಸ್.ಅಂಗಾರ, ಎಸ್.ಕೆ.ಪಿ.ಎ. ಸಂಚಾಲಕ ವಿಠಲ ಚೌಟ, ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಲಯನ್ಸ್ ಕ್ಲಬ್ ಮಾಜಿ ರಾಜ್ಯಪಾಲ ಎಂ.ಬಿ.ಸದಾಶಿವ ಭಾಗವಹಿಸಲಿದ್ದಾರೆ.
ಇದೇ ವೇಳೆ ಅಂತರಾಷ್ಟ್ರೀಯ ಕರಾಟೆ ಪಟು ಪ್ರತೀಕ್ ದೇವ, ರಾಷ್ಟ್ರಮಟ್ಟದ ವೇಟ್ ಲಿಪ್ಟರ್ ಲಾವಣ್ಯ ಆರ್ ರೈ ಅವರನ್ನು ಸನ್ಮಾನಿಸಲಾಗುವುದು. ಉದ್ಘಾಟನೆಗೆ ಮುನ್ನ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ಕ್ರೀಡಾ ಕೂಟದ ಮೆರವಣಿಗೆ ನಡೆಯಲಿದೆ. ಪೊಲೀಸ್ ವೃತ್ತ ನಿರೀಕ್ಷಕ ಆರ್.ಸತೀಶ್ ಕುಮಾರ್ ಉದ್ಘಾಟಿಸುವರು. ಸಂಘದ ಸದಸ್ಯರಿಗೆ ಮತ್ತು ಕುಟುಂಬದವರಿಗಾಗಿ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಎಸ್.ಕೆ.ಪಿ.ಎ ಮಾಜಿ ಜಿಲ್ಲಾಧ್ಯಕ್ಷ ಗೋಪಾಲಕೃಷ್ಣ ಸುಳ್ಯ, ಸುಳ್ಯ ವಲಯ ಅಧ್ಯಕ್ಷ ಕರುಣಾಕರ ಎಣ್ಣೆಮಜಲು, ಗೌರವಾಧ್ಯಕ್ಷ ಬಾಲಕೃಷ್ಣ ಗುತ್ತಿಗಾರು, ಉಪಾಧ್ಯಕ್ಷರಾದ ಅನುರಾಜ್ ಪಂಜ, ದಿವಾಕರ ಮುಂಡೋಡಿ, ಕ್ರೀಡಾ ಕಾರ್ಯದರ್ಶಿ ರತೀಶ್ ಬೆಳ್ಳಾರೆ, ದಿನೇಶ್ ಏನೆಕಲ್ಲು, ಹರೀಶ್ ಸುಳ್ಯ ಉಪಸ್ಥಿತರಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?