ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸಂಘಟನಾ ಚಟುವಟಿಕೆಗಳಿಗೆ ಚಾಲನೆ ನೀಡಲಾಗಿದೆ. ಗುರುವಾರ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಮತ್ತು ಇತರ ಜಿಲ್ಲಾ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಸುಳ್ಯ ಮಂಡಲ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಂಘಟನಾ ಚಟುವಟಿಕೆಗೆ ವೇಗ ಹೆಚ್ಚಿಸಲು ನಿರ್ಧರಿಸಲಾಯಿತು.
ಮಂಡಲ ಮತ್ತು ಬೂತ್ ಸಮಿತಿಗಳ ಅವಧಿ ಮುಗಿದಿದ್ದು ಮುಂದಿನ ಒಂದು ತಿಂಗಳಲ್ಲಿ ಎಲ್ಲಾ ಸಮಿತಿಗಳ ಪುನರ್ ರಚನೆಗೆ ನಿರ್ಧರಿಸಲಾಯಿತು. ಕ್ಷೇತ್ರದ 231 ಬೂತ್ ಸಮಿತಿಗಳ ಪೈಕಿ ಈಗಾಗಲೇ 100 ಬೂತ್ ಸಮಿತಿಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಸೆ.30ರ ಒಳಗೆ ಎಲ್ಲಾ ಬೂತ್ ಸಮಿತಿಯ ಪುನರ್ ರಚನೆಗೆ ನಿರ್ಧರಿಸಲಾಯಿತು. ಅ.15ರಿಂದ 30ರೊಳಗೆ ಮಂಡಲ ಸಮಿತಿ ಪುನರ್ ರಚನೆ ನಡೆಯಲಿದೆ. ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ನೇತೃತ್ವದ ಸಮಿತಿಯ ಅವಧಿ ಮುಗಿದಿದ್ದು ನೂತನ ಸಾರಥಿಗಳ ಆಯ್ಕೆ ನಡೆಯಲಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಜಿಲ್ಲಾ ಮುಖಂಡರಾದ ಪ್ರತಾಪ ಸಿಂಹ ನಾಯಕ್, ಸುದರ್ಶನ ಮೂಡಬಿದ್ರೆ, ಪ್ರಸಾದ್ ಬೆಳ್ತಂಗಡಿ, ಸುಳ್ಯ ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮತ್ತಿತರ ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…