ಸುಳ್ಯ:ಸುಳ್ಯ ಬಿಜೆಪಿ ಮಂಡಲ ಸಮಿತಿ ನೂತನ ಅಧ್ಯಕ್ಷರಾಗಿ ಹರೀಶ್ ಕಂಜಿಪಿಲಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಧ್ಯಕ್ಷರಾಗಿದ್ದ ವೆಂಕಟ್ ವಳಲಂಬೆ ಅವರ ಅವಧಿ ಮುಗಿದ ಹಿನ್ನಲೆಯಲ್ಲಿ ಹೊಸ ಅಧ್ಯಕ್ಷರ ಆಯ್ಕೆ ನಡೆಯಿತು. ಸುಳ್ಯ ವೆಂಕಟ್ರಮಣ ದೇವಸ್ಥಾನದ ಸಭಾಭವನದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಆಯ್ಕೆ ನಡೆಯಿತು. ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರುಗಳು, ಬಿಜೆಪಿ ಸಕ್ರೀಯ ಸದಸದರು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರ ಪಂಚಾಯತ್ ಸದಸ್ಯರು ಭಾಗವಹಿಸಿದ್ದ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಜಿಲ್ಲಾ ಚುನಾವಣಾ ಸಂಚಾಲಕ ಗೋಪಾಲಕೃಷ್ಣ ಹೇರಳೆ, ವಿಭಾಗ ಚುನಾವಣಾ ಪ್ರಭಾರಿ ಉದಯಕುಮಾರ್ ಶೆಟ್ಟಿ, ಶಾಸಕ ಎಸ್.ಅಂಗಾರ ಉಪಸ್ಥಿತರಿದ್ದರು. ಮಮಡಲ ಸಮಿತಿಯ ಉಳಿದ ಪದಾಧಿಕಾರಿಗಳ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ.
ಎರಡನೇ ಬಾರಿಗೆ ಹರೀಶ್ ಕಂಜಿಪಿಲಿ ಮಂಡಲ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ವೆಂಕಟ್ ವಳಲಂಬೆ ಅವರಿಗಿಂತ ಮೊದಲು ಮೂರು ವರ್ಷಗಳ ಕಾಲ ಮಂಡಲ ಸಮಿತಿ ಅಧ್ಯಕ್ಷರಾಗಿದ್ದರು. ಅರಂತೋಡು ಕ್ಷೇತ್ರದ ಜಿ. ಪಂ. ಸದಸ್ಯರಾಗಿರುವ ಹರೀಶ್ ಕಂಜಿಪಿಲಿ, ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…
ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…
ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…
ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…