ಸುಳ್ಯ:ಮಹಾತ್ಮಾ ಗಾಂಧೀಜಿಯವರ 150 ನೇ ಜಯಂತಿ ಆಚರಣೆ ಕನಕ ಮಜಲು ಗ್ರಾಮ ಕಾಂಗ್ರೆಸ್ ಆಶ್ರಯದಲ್ಲಿ ಕನಕ ಮಜಲು ಶ್ರೀಮತಿ ಸೀತಮ್ಮ ನರಿಯೂರು ಇವರ ಮನೆಯಲ್ಲಿ ನಡೆಯಿತು. ಕನಕ ಮಜಲು ಗ್ರಾಮ ಕಾಂಗ್ರೆಸ್ ಅಧ್ಯಕ್ಷ ಹೇಮಚಂದ್ರ ಕುತ್ಯಾಳ ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಗಾಂಧೀವಾದಿ ಕೊರಂಬಡ್ಕ ಮೋನಪ್ಪ ಗೌಡರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಅಧ್ಯಾಪಕರು ಕೇಪು ಸುಂದರ ಗೌಡ ನೆರವೇರಿಸಿದರು.
ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಮಿತಿ ಸುಳ್ಯ ಇದರ ಅಧ್ಯಕ್ಷ ಎಸ್ ಎಂ ಬಾಪು ಸಾಹೇಬ್ ಹಾಗು ನಿವೃತ್ತ ಪ್ರಾಧ್ಯಾಪಕ ಸೀತಾರಾಮ ಬುಡ್ಲೆಗುತ್ತು ಗಾಂಧೀ ಸಂದೇಶ ನೀಡಿದರು. ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ, ಹಾಗು ಸುಳ್ಯ ವಕೀಲರ ಸಂಘದ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕನಕ ಮಜಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಬೀರಾ ಮೊಯಿದೀನ್ ವಂದಿಸಿದರು. ವಿಜಯ ಕುಮಾರ ನರಿಯೂರು ಕಾರ್ಯಕ್ರಮ ನಿರೂಪಿಸಿದರು. ವಕೀಲ ಮಹಮ್ಮದ್ ಪವಾಜ್ , ನಂದರಾಜ್ ಸಂಕೇಶ, ಶಶಿಧರ ಎಂ ಜೆ, ಭವಾನಿಶಂಕರ್ ಕಲ್ಮಡ್ಕ, ದಿನೇಶ್ ಸರಸ್ವತಿ ಮಹಲು, ಗ್ರಾಮ ಸಮಿತಿ ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಉಪಸ್ತಿತರಿದ್ದರು.
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…