ಸುಳ್ಯ: ಶ್ರೀರಾಮ್ ಪೇಟೆ ಮುಖ್ಯ ರಸ್ತೆಯಲ್ಲಿರುವ ಒಳ ಚರಂಡಿ ಮ್ಯಾನ್ ಹೋಲ್ ನೀರು ರಸ್ತೆ ಮೇಲೆ ಹರಿಯುತ್ತಿದ್ದು ಜನರು ಕೆಟ್ಟ ವಾಸನೆ ಸಹಿಸದೆ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ . ಚರಂಡಿ ಪಕ್ಕದಲ್ಲಿಯೇ ಭಜನಾ ಮಂದಿರ, ಪ್ರತಿಷ್ಠಿತ ಕ್ಯಾಂಟೀನ್ ಹಾಗೂ ಹೋಟೆಲ್ ಗಳೂ ಇವೆ.
ಸರಕಾರಿ ಆಸ್ಪತ್ರೆಯ ಮುಂಭಾಗ ಬಸ್ ತಂಗುದಾಣ ಇರುವುದರಿಂದ ವಿದ್ಯಾರ್ಥಿಗಳು, ಸಿಬ್ಬಂದಿಗಳು ಹಾಗೂ ನೌಕರರು ಇದೇ ರಸ್ತೆಯಲ್ಲಿ ಓಡಾಡಬೇಕು. ಕೆಟ್ಟ ವಾಸನೆಯಿಂದ ಸಂಚರಿಸಲು ಆಗುತ್ತಿಲ್ಲ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತ್ಯಾಜ್ಯವನ್ನು ಹೊರತೆಗೆದು ದುರಸ್ಥಿಪಡಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಸುಳ್ಯ ಆಗ್ರಹಿಸಿದೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಇದರ ದುರಸ್ಥಿ ಕಾರ್ಯವನ್ನು ಕೈಗೊಳ್ಳದಿದ್ದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದೆಂದು ಆಮ್ ಆದ್ಮಿ ಪಾರ್ಟಿ ಸುಳ್ಯದ ಮುಖಂಡರು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel