ಸುಳ್ಯ: ಮುಖ್ಯರಸ್ತೆಯ ಮೇಲೆ ಚರಂಡಿ ನೀರು

October 15, 2019
3:53 PM

ಸುಳ್ಯ: ಶ್ರೀರಾಮ್ ಪೇಟೆ ಮುಖ್ಯ ರಸ್ತೆಯಲ್ಲಿರುವ ಒಳ ಚರಂಡಿ ಮ್ಯಾನ್ ಹೋಲ್ ನೀರು ರಸ್ತೆ ಮೇಲೆ ಹರಿಯುತ್ತಿದ್ದು ಜನರು ಕೆಟ್ಟ ವಾಸನೆ ಸಹಿಸದೆ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ . ಚರಂಡಿ ಪಕ್ಕದಲ್ಲಿಯೇ ಭಜನಾ ಮಂದಿರ, ಪ್ರತಿಷ್ಠಿತ ಕ್ಯಾಂಟೀನ್ ಹಾಗೂ ಹೋಟೆಲ್ ಗಳೂ  ಇವೆ.

ಸರಕಾರಿ ಆಸ್ಪತ್ರೆಯ ಮುಂಭಾಗ ಬಸ್ ತಂಗುದಾಣ ಇರುವುದರಿಂದ ವಿದ್ಯಾರ್ಥಿಗಳು, ಸಿಬ್ಬಂದಿಗಳು ಹಾಗೂ ನೌಕರರು ಇದೇ ರಸ್ತೆಯಲ್ಲಿ ಓಡಾಡಬೇಕು. ಕೆಟ್ಟ ವಾಸನೆಯಿಂದ ಸಂಚರಿಸಲು ಆಗುತ್ತಿಲ್ಲ.  ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತ್ಯಾಜ್ಯವನ್ನು ಹೊರತೆಗೆದು ದುರಸ್ಥಿಪಡಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಸುಳ್ಯ ಆಗ್ರಹಿಸಿದೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಇದರ ದುರಸ್ಥಿ ಕಾರ್ಯವನ್ನು ಕೈಗೊಳ್ಳದಿದ್ದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದೆಂದು ಆಮ್ ಆದ್ಮಿ ಪಾರ್ಟಿ ಸುಳ್ಯದ ಮುಖಂಡರು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror