ಸುಳ್ಯ: ವಿಶ್ವ ಹಿಂದೂ ಪರಿಷದ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆದ ಆರನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವದಲ್ಲಿ ವಿಕ್ರಮ ಯುವಕ ಮಂಡಲ ಜಯನಗರ ತಂಡ 85 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆಯಿತು.
ಶ್ರೀರಾಮ ಶಾಖೆ ಪೇರಾಲು ತಂಡ 80 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಮತ್ತು ವೀರಾಂಜನೇಯ ಉಬರಡ್ಕ ತಂಡ 65 ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿತು. ಒಟ್ಟು 13 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದವು.
ಸುಳ್ಯ ನಗರದ ವಿವಿಧ ಭಾಗಗಳಲ್ಲಿ ಸ್ಥಾಪಿಸಿದ ಅಟ್ಟಿ ಮಡಿಕೆಗಳನ್ನು ಯುವಕರ ತಂಡ ಆಕರ್ಷಕ ಪಿರಮಿಡ್ ರಚಿಸಿ ಒಡೆಯುವ ಸ್ಪರ್ಧೆ ನೋಡುಗರ ಮೈ ನವಿರೇಳಿಸಿತು. ಶ್ರೀಕೃಷ್ಣನ ಸುಂದರ ರಥದೊಂದಿಗೆ ಸಾಗಿದ ಶೋಭಾಯಾತ್ರೆಯಲ್ಲಿ ಯುವಕರ ತಂಡ ಸುಮಾರು 18 ಕಡೆಗಳಲ್ಲಿ ಸ್ಥಾಪಿಸಲಾದ ಅಟ್ಟಿ ಮಡಿಕೆಗಳನ್ನು ಒಡೆದರು.
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …