Advertisement
Categories: ಮಾಹಿತಿ

ಸುಳ್ಯ: ಶಾಂತಿಯುತ ಮತದಾನ :

Share

ತಾಲೂಕಿನಲ್ಲಿ ದಾಖಲೆಯ ಶೇ.84.10 ಮತದಾನ

ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸುಳ್ಯದಲ್ಲಿ ಶಾಂತಿಯುತ ಮತದಾನ ನಡೆಯಿತು. ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಸಂಜೆಯ ವೇಳೆಗೆ ಒಟ್ಟು ಶೇ.84.10 ಮತದಾನವಾಗಿದೆ. ದಾಖಲೆ ಪ್ರಮಾಣದಲ್ಲಿ ಮತದಾನ ಸುಳ್ಯ ತಾಲೂಕಿನಲ್ಲಿ ನಡೆದಿದ್ದು ಜಿಲ್ಲೆಯಲ್ಲಿ ಅತ್ಯಧಿಕ ಮತದಾನವಾದ ತಾಲೂಕಾಗಿದೆ.
ಬೆಳಿಗ್ಗೆ ಏಳು ಗಟೆಯಿಂದ ಮತದಾನ ಕಾರ್ಯ ಆರಂಭಗೊಂಡಿದ್ದು ಕೆಲವು ಬೂತ್‍ಗಳಲ್ಲಿ ಬೆಳಿಗ್ಗೆ ಆರು ಗಂಟೆಯಿಂದಲೇ ಸರತಿ ಸಾಲು ಇತ್ತು. ಬೆಳಿಗ್ಗೆ ಬಿರುಸಿನ ಮತದಾನ ನಡೆದರೆ ಬಳಿಕ ಸರತಿ ಸಾಲು ಕಡಿಮೆಯಾಗಿ ನಿಧಾನವಾಯಿತು. ಮಧ್ಯಾಹ್ನದ ಬಳಿಕ ಮತ್ತೆ ಬಿರುಸು ಪಡೆದುಕೊಂಡಿತ್ತು. ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ಅಂತಹಾ ಕಡೆಗಳಲ್ಲಿ ಕೂಡಲೇ ಬೇರೆ ಮತ ಯಂತ್ರವನ್ನು ಒದಗಿಸಿ ಮತದಾನ ಮುಂದುವರಿಸಲಾಯಿತು.
ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಕ್ಸಲ್ ಬಾದಿತ ಬೂತ್‍ಗಳಲ್ಲಿ, ಸೂಕ್ಷ್ಮ ಮತಗಟ್ಟೆಗಳಲ್ಲಿಯೂ ಬಿರುಸಿನ ಮತದಾನ ನಡೆಯಿತು. ಜನರು ನಿರಾಂತಕವಾಗಿ ಮತದಾನ ಮಾಡಿದರು. ಬಿಗು ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕೇಂದ್ರೀಯ ಮೀಸಲು ಪಡೆ, ಪೊಲೀಸ್, ಗೃಹ ರಕ್ಷಕ ದಳ ಭದ್ರತೆಯನ್ನು ಒದಗಿಸಿತು. ಕ್ಷೇತ್ರದಲ್ಲಿ ನಕ್ಸಲ್ ಬಾದಿತ ಬೂತ್‍ಗಳು ಸೇರಿದಂತೆ ಕ್ರಿಟಿಕಲ್ ಬೂತ್‍ಗಳಲ್ಲಿ ವಿಶೇಷ ಭದ್ರತಾ ವ್ಯವಸ್ಥೆಯನ್ನು ಒದಗಿಸಲಾಯಿತು. 18 ಮೊಬೈಲ್ ಸ್ಕ್ವಾಡ್‍ಗಳು ಕ್ಷೇತ್ರದಲ್ಲಿ ಸಂಚಾರ ನಡೆಸಿದ್ದರು.

13 ಕಡೆ ವೆಬ್ ಕಾಸ್ಟಿಂಗ್:
13 ಬೂತ್‍ಗಳಲ್ಲಿ ವೆಬ್ ಕಾಸ್ಟಿಂಗ್, 15 ಬೂತ್‍ಗಳಲ್ಲಿ ವೀಡಿಯೋಗ್ರಾಫಿ ಮಾಡಲಾಯಿತು. 58 ಮೈಕ್ರೋ ವೀಕ್ಷಕರನ್ನು ನೇಮಕ ಮಾಡಲಾಗಿತ್ತು.
ಬೆಳಿಗ್ಗೆ ಎಲ್ಲಾ ಮತಗಟ್ಟೆಗಳಲ್ಲೂ ಉದ್ದದ ಸರತಿ ಸಾಲಿದ್ದು ಬಿರುಸಿನ ಮತದಾನ ನಡೆದರೆ ಬಳಿಕ ನಿಧಾನವಾಯಿತು. ಮಧ್ಯಾಹ್ನ ಒಂದು ಗಂಟೆ ಗಂಟೆಯ ವೇಳೆಗೆ ಶೇ.53.13 ಮತದಾನವಾಗಿತ್ತು. ಮಧ್ಯಾಹ್ನ ಮೂರು ಗಂಟೆಗೆ ಶೇ.65.04 ಮತದಾನವಾಗಿತ್ತು. ಕೆಲವು ಬೂತ್‍ಗಳಲ್ಲಿ ಮಧ್ಯಾಹ್ನದ ಬಳಿಕ ಮತ್ತು ಚುನಾವಣಾ ಸಮಯ ಮುಗಿಯುವ ವೇಳೆಗೆ ಮತದಾನ ಬಿರುಸುಗೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

7 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

12 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

17 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

20 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago