ಸುಳ್ಯ:ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ನಡೆಯುತ್ತಿರುವ ೪೮ ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ -ಸುಳ್ಯ ದಸರಾದ ಅಂಗವಾಗಿ ಶುಕ್ರವಾರ ಚಂಡಿಕಾ ಮಹಾಯಾಗ ನಡೆಯಿತು. ಲೋಕ ಕಲ್ಯಾಣಾರ್ಥವಾಗಿ ಸುಳ್ಯ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಸಹಕಾರದೊಂದಿಗೆ ಬೆಳಿಗ್ಗೆ 8 ಗಂಟೆಗೆ ಆರಂಭಗೊಂಡ ಸಾರ್ವಜನಿಕ ಶ್ರೀ ಮಹಾಗಣಪತಿ ಹವನ ಸಹಿತ ಶ್ರೀ ಚಂಡಿಕಾ ಮಹಾಯಾಗ 12.30ಕ್ಕೆ ಪೂರ್ಣಾಹುತಿ ನಡೆಯಿತು. ಬಳಿಕ ಮಹಾಪೂಜೆ ನಡೆಯಿತು.
ಶಾರದಾಂಬಾ ವೇದಿಕೆಯಲ್ಲಿ ಸುಳ್ಯ ಮಹಿಳಾ ಪರಿಷತ್ನಿಂದ ಭಜನೆ ನಡೆಯಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

