Advertisement
ಸುದ್ದಿಗಳು

ಸುಳ್ಯ ಶಾಸಕರಿಗೆ ತಪ್ಪಿದ ಸಚಿವ ಸ್ಥಾನ – ಬಿಜೆಪಿ ನೇತೃತ್ವದ ವಿರುದ್ಧ ಆಕ್ರೋಶ

Share

ಸುಳ್ಯ: ಸತತ ಆರು ಬಾರಿ ಸುಳ್ಯ ಕ್ಷೇತ್ರದಿಂದ ಆರಿಸಿ ಬಂದರೂ ಶಾಸಕ ಎಸ್‌.ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಲು ಸುಳ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜನಪ್ರತಿನಿಧಿಗಳ ಮತ್ತು ಪಕ್ಷದ ಪ್ರಮುಖರ ಸಭೆ ಬುಧವಾರ ನಡೆಯಿತು.

ಸಭೆಯಲ್ಲಿ ಭಾಗವಹಿಸಿದವರು ಅಂಗಾರರಿಗೆ ಸಚಿವ ಸ್ಥಾನ ಸಿಗದಕ್ಕೆ ಬಿಜೆಪಿಯ ಜಿಲ್ಲೆ ಮತ್ತು ರಾಜ್ಯ ನೇತೃತ್ವದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಆರು ಬಾರಿ ಶಾಸಕರಾದ ಅಂಗಾರರನ್ನು ಕಡೆಗಣಿಸಿ ಸುಳ್ಯಕ್ಕೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಬಿಜೆಪಿ ರಾಜ್ಯ ನೇತೃತ್ವ ತೀವ್ರ ಅನ್ಯಾಯ ಮಾಡಿದೆ ಎಂದು ಕೆಲವರು ಹೇಳಿದರು. ಜಿಲ್ಲೆಯಲ್ಲಿ ಏಳು ಮಂದಿ ಶಾಸಕರಿದ್ದರೂ ಅವರಲ್ಲಿ ಹಿರಿಯರಾದ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಕೊಡಿಸಲು ಜಿಲ್ಲಾ ಬಿಜೆಪಿ ನೇತೃತ್ವ ಪ್ರಯತ್ನ ನಡೆಸಿಲ್ಲ ಎಂಬ ಆಕ್ರೋಶವೂ ಕೇಳಿ ಬಂತು. ಶಾಸಕ ಅಂಗಾರರಿಗೆ ಸಚಿವ ಸ್ಥಾನ ಸಿಗದ ಬಗ್ಗೆ ಜಿಲ್ಲೆಯ ನಾಯಕರು ಮತ್ತು ಇತರ ಶಾಸಕರು ಧ್ವನಿ ಎತ್ತದೇ ಇರುವ ಬಗ್ಗೆಯೂ ಸಭೆಯಲ್ಲಿ ಪ್ರಶ್ನಿಸಲಾಯಿತು. ಬಳಿಕ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಕ್ರೂಢೀಕರಿಸಿ ಸಚಿವ ಸ್ಥಾನ ಸಿಗುವ ತನಕ ಅಸಹಕಾರ ಚಳುವಳಿ ನಡೆಸಲು ನಿರ್ಧರಿಸಲಾಯಿತು. ಜನಪ್ರತಿನಿಧಿಗಳು, ಪಕ್ಷದ ಪ್ರಮುಖರು ತಮ್ಮ ಹುದ್ದೆಗೆ ರಾಜಿನಾಮೆ ಘೋಷಿಸಿ ಅಧ್ಯಕ್ಷರಿಗೆ ರಾಜಿನಾಮೆ ಪತ್ರ ಸಲ್ಲಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

24 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

24 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

2 days ago