ಸುಳ್ಯ: ನಿರಂತರ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಯಾಗಿರುವ ಸುಳ್ಯದ ಎಸ್.ಅಂಗಾರರಿಗೆ ಕೂಡಲೇ ಸಚಿವ ಸ್ಥಾನ ನೀಡಬೇಕು ಎಂದು ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಕೆ.ಎಂ.ಬಾಬು ಜಾಲ್ಸೂರು ಶಾಸಕರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಎಲ್ಲರಿಗೂ ಇತ್ತು. ಆದರೆ ಕೊನೆಯ ಕ್ಷಣದಲ್ಲಿ ತಪ್ಪಿದೆ. ಸಚಿವರಾಗುತ್ತಿದ್ದರೆ ಈ ಭಾಗದ ಅಭಿವೃದ್ಧಿಗೆ ಪೂರಕವಾಗುತ್ತಿತ್ತು. ಆದ್ದರಿಂದ ಇನ್ನಾದರೂ ಅವರಿಗೆ ಸಚಿವ ಸ್ಥಾನ ನೀಡಬೇಕು. ಸ್ಥಾನ ನೀಡದೇ ಇದ್ದರೆ ಎಲ್ಲ ದಲಿತ ಸಂಘಟನೆಗಳು ಒಟ್ಟಾಗಿ ಸೇರಿ, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಹೋರಾಟ ನಡೆಸುತ್ತೇವೆ. ಸಚಿವ ಸ್ಥಾನ ತಪ್ಪಿರುವುದಕ್ಕೆ ಜಿಲ್ಲೆಯ ಇತರ ಶಾಸಕರು, ಮುಖಂಡರು ಕೂಡಾ ಧ್ವನಿ ಎತ್ತದಿರುವುದು ಬೇಷರ ತಂದಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮೋನಪ್ಪ ರಾಜಾರಾಂ ಪುರ, ಕಾರ್ಯದರ್ಶಿ ದಿಲೀಪ್ ಕೊಡಿಯಾಲಬೈಲು, ಖಜಾಂಜಿ ಮಲ್ಲೇಶ್ ಕುಡೆಕಲ್ಲು, ವಿಜಯ ಆಲಡ್ಕ, ಚಂದ್ರಕಾಂತ ಮೂಡಾಯಿತೋಟ, ಜಗನ್ನಾಥ, ಕೇಶವ ಕಲ್ಪಡ ಉಪಸ್ಥಿತರಿದ್ದರು.
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…