ಸುಳ್ಯ : ಈ ಹಿಂದೆ ಸ್ವಾತಂತ್ರ ಸಮರಕ್ಕೆ ಧುಮುಕಲು ಜನರನ್ನು ಒಗ್ಗೂಡಿಸಲು ಬಾಲಗಂಗಾಧರ ತಿಲಕರು ಸಾಮೂಹಿಕ ಗಣೇಶೋತ್ಸವವನ್ನು ಆಚರಣೆಗೆ ತಂದರು. ಇದೀಗ ಸಾರ್ವತ್ರಿಕವಾಗಿ ಸಾರ್ವಜನಿಕ ಆಚರಣೆಗಳು ಅಲ್ಲಲ್ಲಿ ನಡೆಯುತ್ತಿದ್ದು, ಮತ್ತೆ ದೇಶ ಬಲಿಷ್ಠಗೊಳ್ಳಲು ಇದು ಸಹಕಾರಿ ಎಂದು ಶಾಸಕ ಎಸ್.ಅಂಗಾರ ತಿಳಿಸಿದರು.
ಅವರು ಸುಳ್ಯದ ಶ್ರೀಸಿದ್ಧಿ ವಿನಾಯಕ ಸೇವಾ ಸಮಿತಿ ಮತ್ತು ಸಾರ್ವಜನಿಕ ಶ್ರೀದೇವತಾರಾಧನಾ ಸಮಿತಿ ವತಿಯಿಂದ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆದ ಸಾರ್ವಜನಿಕ ಶ್ರೀಗಣೇಶೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ ನೂತನ ಗಣೇಶ ಗುಡಿ ನಿರ್ಮಾಣ ಕಾರ್ಯ ಆದಷ್ಟು ಬೇಗ ಕೈಗೂಡಲಿ ಎಂದರು.
ತಾಲೂಕು ಆಸ್ಪತ್ರೆಯ ಮುಖ್ಯ ವೈದ್ಯಾ„ಕಾರಿ ಡಾ|ಭಾನುಮತಿ ವಿ. ಶುಭ ಹಾರೈಸಿದರು. ಗೌರವಾಧ್ಯಕ್ಷ ಕೆ.ಎಸ್.ಚಂದ್ರಶೇಖರ್, ಪೂರ್ವಾಧ್ಯಕ್ಷ ಕೆ.ಎಸ್.ಗೋಪಾಲಕೃಷ್ಣ, ಅಧ್ಯಕ್ಷ ಎಸ್.ಗುರುದತ್ ಶೇಟ್, ಪಿ.ಕೆ.ಉಮೇಶ್, ಡಾ|ಲೀಲಾಧರ್ ಡಿ.ವಿ. ಉಪಸ್ಥಿತರಿದ್ದರು.
ಡಿ.ಟಿ.ದಯಾನಂದ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಶಶಿಧರ ಎಂ.ಜೆ. ನಿರೂಪಿಸಿ, ವಂದಿಸಿದರು.
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…