ಶ್ರೀ ಭಗವತಿ ಸಾನಿಧ್ಯ ಬಂಧವಿರುವ ಶ್ರೀ ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವವು ಶ್ರೀ ಚೆನ್ನಕೇಶವ ದೇವಸ್ಥಾನದ ರಾಜಗೋಪುರದ ಎದುರುಗಡೆ ಮಾ.29ರಂದು ನಡೆಯಿತು. ಬೆಳಗ್ಗೆ ಅಣ್ಣಪ್ಪ ಪಂಜುರ್ಲಿ ಮತ್ತು ರಕ್ತೇಶ್ವರಿ ಮತ್ತು ಇತರ ದೈವಗಳಿಗೆ ತಂಬಿಲ ನಡೆಯಿತು. ರಾತ್ರಿ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವ ನಡೆಯಿತು. ನಂತರ ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮವರ್ಶಿ ಡಾ.ಹರಪ್ರಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ ಚಿದಾನಂದ, ದೈವದ ಆಡಳಿತದಾರ ಕೆ. ರಾಮಕೃಷ್ಣ ರಾವ್ ಮುರೂರು ಕಾಪಿನಡ್ಕ, ಜೀರ್ಣೋದ್ಧಾರ ಸಮಿತಿ ಸದಸ್ಯರು ಹಾಗೂ ಸಾವಿರಾರು ಭಕ್ತಾಧಿಗಳು ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel