ಸುಳ್ಯ: ಸುಳ್ಯ ನಗರದ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ತೆರಳುವ ರಸ್ತೆ ತೀರಾ ಹದೆಗೆಟ್ಟಿದ್ದು, ಹಲವು ವರ್ಷಗಳಿಂದ ಇದೇ ಸ್ಥಿತಿಯಲ್ಲಿದೆ. ಹೀಗಾಗಿ ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಉಪಕಾರವಾಗುವಂತೆ ಮಾಡಬೇಕು ಎಂದು ಸುಳ್ಯ ತಹಶೀಲ್ದಾರ್ ಅವರಿಗೆ ಸುಳ್ಯ ನಗರ ಪಂಚಾಯತ್ ಬೂಡು ವಾರ್ಡ್ ನ ಸದಸ್ಯರಾದ ಹಾಗೂ ಮಲನಾಡು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ರಿಯಾಜ್ ಕಟ್ಟೆಕ್ಕಾರ್ ಮನವಿ ಮಾಡಿದರು.
ಈ ರಸ್ತೆಯಲ್ಲಿ ಆಸ್ಪತ್ರೆಗೆ ಬರುವ ಮಕ್ಕಳು, ಮಹಿಳೆಯರು, ಗಂಡಸರು, ಗರ್ಭಿಣಿ ಸ್ತ್ರೀಯರು, ಹಾಗೂ ವೃದ್ಧರೂ ಓಡಾಡುತ್ತಾರೆ. ಆಂಬ್ಯೂಲೆನ್ಸ್ ಹಾಗೂ ಖಾಸಗಿ ವಾಹನದಲ್ಲಿ ಈ ರಸ್ತೆಯಲ್ಲಿ ತೆರಳುವುದು ಕ್ಲಿಷ್ಟಕರವಾಗಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಉಪಕಾರವಾಗುವಂತೆ ಮಾಡಬೇಕು ಎಂದು ತಹಶೀಲ್ದಾರರಿಗೆ ಮನವಿಯನ್ನು ಸಲ್ಲಿಸಿದರು.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…