ಸುಳ್ಯ:ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅ. 2 ರಂದು ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಗಾಂಧಿ ಜಯಂತಿ ಆಚರಣೆ ನಡೆಯಿತು. ಗಾಂಧಿ ಚಿಂತನವನ್ನು ನಡೆಸಿ ಕೊಟ್ಟ ಹಿಂದಿ ವಿಭಾಗದ ಮುಖ್ಯಸ್ಥರಾದ ರಾಮಕೃಷ್ಣ ಕೆ.ಎಸ್. ಅವರು, ಇತ್ತೀಚಿನ ದಿನಗಳಲ್ಲಿ ಯುವ ಜನರಲ್ಲಿ ಗಾಂಧಿ ಚಿಂತನೆಗಳ ಬಗೆಗಿನ ಒಲವು ಕಡಿಮೆಯಾಗುತ್ತಿದೆ ಹಾಗೂ ಅತಿಯಾದ ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಚ್ಯುತ ಪೂಜಾರಿ ಕೆ. ಅವರು ಮಾತನಾಡಿ, ಯುವಜನತೆಯಲ್ಲಿ ಗಾಂಧಿಜಿಯವರ ಆದರ್ಶಗಳ ಬಗ್ಗೆ ಅರಿವನ್ನು ಮೂಡಿಸುವ ಕೆಲಸವಾಗಬೇಕು ಎಂದರು. ವೇದಿಕೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಸತೀಶ್ ಕುಮಾರ್ ಕೆ. ಆರ್, ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ಯೋಜನಾಧಿಕಾರಿಗಳಾದ ಶ್ರೀಮತಿ ಸುರೇಖಾ ಹೆಚ್, ಹಾಗೂ ಧನರಾಜ್ ಕುಮಾರ್ ಅವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಿಶ್ಮಿತಾ ನಿರೂಪಿಸಿದರು. ಘಟಕದ ನಾಯಕಿ ಪ್ರಸನ್ನ ಕುಮಾರಿ ಸ್ವಾಗತಿಸಿ, ವಿದ್ಯಾರ್ಥಿನಿ ದೀಕ್ಷಿತಾ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಕೊಡಿಯಾಲಬೈಲಿನಿಂದ ಸುಳ್ಯದ ವರೆಗಿನ ರಸ್ತೆಯ ಬದಿಯ ಸ್ವಚ್ಛತೆ ನಡೆಸಲಾಯಿತು.
ಈಗಿನಂತೆ ಈ ಮಳೆಯು ನವೆಂಬರ್ 4ರ ವರೆಗೆ ಮುಂದುವರಿಯುವ ಲಕ್ಷಣಗಳಿವೆ.
ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು…
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈರುತ್ಯ ರೈಲ್ವೆ ರಾಜ್ಯದ ವಿವಿಧ…
ಕಂದಾಯ ಅಧಿಕಾರಿಗಳು ಸಂವೇದನಾಶೀಲತೆಯಿಂದ ಕಾರ್ಯ ನಿರ್ವಹಿಸಿದರೆ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ನೀಡಬಹುದು ಎಂದು…
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಬರಾಜು ಮಾಡುವ ಅಗತ್ಯ ಔಷಧಿಗಳ ಪಟ್ಟಿಯನ್ನು 250 ರಿಂದ…
ದೀಪಾವಳಿಯ ವೇಳೆ ಪಟಾಕಿ ಸಿಡಿಸುವಾಗ ಇರಲಿ ಎಚ್ಚರ.