ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

September 14, 2019
8:00 PM

ಸುಳ್ಯ: ಜೀವನದಲ್ಲಿ ಅನೇಕ ಸವಾಲುಗಳು ಎದುರಾಗುತ್ತವೆ. ಕಾಲಕ್ಕೆ ತಕ್ಕಂತೆ ಬರುವ ಸವಾಲುಗಳನ್ನು ಎದುರಿಸಿಕೊಂಡು ಮುನ್ನಡೆದಾಗ ಜೀವನದಲ್ಲಿ ಯಶಸ್ವಿ ವ್ಯಕ್ತಿಗಳಾಗಲು ಸಾಧ್ಯ ಎಂದು ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಹೇಳಿದರು.

ಅವರು ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪ್ರತಿಭಾ ದಿನಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಶಾಸಕ ಎಸ್ ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಂಶುಪಾಲ ಡಾ ಅಚ್ಯುತ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿ ಕಾರ್ಯದರ್ಶಿಗಳಾದ ರಕ್ಷಿತ್ ಕೆ, ಹರ್ಷಿತ್, ಐಶ್ವರ್ಯ ರೈ, ಜಶ್ಮಿ.ಪಿ.ಯು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತೀಶ್‍ಕುಮಾರ್ ಕೆ. ಆರ್ ಸ್ವಾಗತಿಸಿ, ಸಾಂಸ್ಕೃತಿಕ ಸಂಘದ ಸಂಚಾಲಕಿ ಲತಾ ವಂದಿಸಿದರು. ಧನರಾಜ್ ಹಾಗೂ ಸುರೇಖಾ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror