ಸುಳ್ಯ: ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೀನು ಆಹಾರ ಮಳಿಗೆ `ಮತ್ಸ್ಯದರ್ಶಿನಿ’ಗಳನ್ನು ರೂ. 11 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು.
ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕುಗಳ ಕೇಂದ್ರಗಳು ಸೇರಿದಂತೆ ಒಟ್ಟು 31 ಕೇಂದ್ರಗಳಲ್ಲಿ ಸಾಮಾನ್ಯ ಜನರಿಗೆ ಎಟಕುವ ದರದಲ್ಲಿ ಮೀನು ಆಹಾರ ಮತ್ತು ತಾಜಾ ಮೀನು ಮಾರಾಟ ಕೇಂದ್ರ ಮತ್ತು ಅಲಂಕಾರಿಕ ಮೀನು ಮಾರಾಟ ಕೇಂದ್ರಗಳನ್ನೊಳಗೊಂಡಿರುವ ಮಳಿಗೆಗಳನ್ನು ನಿರ್ಮಿಸಲು ಅಗತ್ಯ ಕ್ರಮ ವಹಿಸುವಂತೆ ಇಲಾಖಾಧಿಕಾರಿಗಳಗೆ ಸೂಚಿಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು, ಮೀನುಗಾರಿಕಾ ಮತ್ತು ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮೀನುಗಾರಿಕಾ ಇಲಾಖೆಯಲ್ಲಿ ಅಭಿವೃದ್ಧಿಯ ನಿಟ್ಟಿನಲ್ಲಿ ಸಮಗ್ರ ನೀತಿಗೆ ತಿದ್ದುಪಡಿ ತರುವಂತೆ ಸಚಿವ ಸಂಪುಟದ ಅನುಮೋದನೆಗಾಗಿ ಕರಡು ಸಿದ್ಧವಾಗಿದೆ. ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿರುವ ಸ್ಲಿಪ್ ವೇ ನಿರ್ವಹಣೆಯ ಹೊಣೆಗಾರಿಕೆಯನ್ನು ಮಲ್ಪೆ ಮೀನುಗಾರಿಕಾ ಸಂಘಕ್ಕೆ ವಹಿಸಿದ ಬಗ್ಗೆ ಉಡುಪಿ ಜಿಲ್ಲಾಧಿಕಾರಿಯವರಲ್ಲಿ ಈ ಕುರಿತು ವರದಿ ಪಡೆದು ಮುಂದಿನ ಸಭೆಯಲ್ಲಿ ಚರ್ಚಿಸಿ ನಿರ್ಣಯಿಸಲು ತೀರ್ಮಾನಿಸಲಾಗಿದೆ ಎಂದರು.
ಮಲ್ಪೆ ಮತ್ತು ಮಂಗಳೂರಿನಲ್ಲಿ ತೇಲುವ ಜಟ್ಟಿ ನಿರ್ಮಾಣ ಮಾಡುವ ಬಗ್ಗೆ ಐ.ಐ.ಟಿ ಚೆನ್ನೈ ಇವರಿಂದ 15 ದಿನಗಳ ಒಳಗೆ ತಾಂತ್ರಿಕ ವರದಿ ಪಡೆದು ನಿರ್ಮಾಣ ಮಾಡುವ ಬಗ್ಗೆ ಕ್ರಮ ವಹಿಸಲಾಗುವುದು. ಮಲ್ಪೆ ಜಟ್ಟಿ ವಿಸ್ತರಿಸಲು ಅವಶ್ಯವಿರುವ ನಿವೇಶನವನ್ನು ಈಗಾಗಲೇ ವರ್ಗಾಯಿಸಿ ಪಡೆದು ೧೦ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು ಎಂದ ಸಚಿವರು ಹೆಜಮಾಡಿಕೋಡಿ ಮೀನುಗಾರಿಕಾ ಬಂದರು ನಿರ್ಮಾಣಕ್ಕೆ ಅವಶ್ಯವಿರುವ ಭೂಮಿಯನ್ನು 15 ದಿನಗಳ ಒಳಗೆ ಕಂದಾಯ ಇಲಾಖೆಯಿಂದ ಮಾಹಿತಿ ಪಡೆದುಕೊಂಡು 15.1.2020ರ ನಂತರ ಶಿಲಾನ್ಯಾಸ ಮಾಡಲು ಅನುವಾಗುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು. ಮತ್ಸ್ಯಾಶ್ರಯ ಮನೆಗಳ ಪ್ರಗತಿ ಮತ್ತು ಘಟಕ ವೆಚ್ಚ ಹೆಚ್ಚಿಸುವ ಕುರಿತು ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಇವರಿಗೆ ನೀಡಿರುವ ಯೋಜನೆಗಳನ್ನು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ಮಂಗಳೂರು ಇವರಿಂದ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ.
ರಾಜ್ಯದಲ್ಲಿ ಅವಶ್ಯವಿರುವ ಮೀನು ಮರಿಗಳ ಬೇಡಿಕೆಯನ್ನು ರಾಜ್ಯದ ಮೀನು ಮರಿ ಉತ್ಪಾದನಾ ಕೇಂದ್ರಗಳಿಂದಲೇ ಉತ್ಪಾದಿಸಿ ಮೀನು ಕೃಷಿಕರಿಗೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದೀಪಡಿಸಲು ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು. ಮುಜರಾಯಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 2578 ಸಿಬ್ಬಂದಿಗಳಿಗೆ ಈಗಾಗಲೇ ಹೊಸ ವೇತನ ಶ್ರೇಣಿ ನೀಡಲಾಗಿದೆ. ಪ್ರಸ್ತುತ ಸುಮಾರು 1111 ಸಿಬ್ಬಂದಿಗಳು 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪರಿಷ್ಕರಣೆ ಮಾಡುವ ಬಗ್ಗೆ ಬಹಳ ಕಾಲದಿಂದ ಬೇಡಿಕೆ ಇರುತ್ತದೆ. ಈ ಬಗ್ಗೆ ನಿಯಮಾವಳಿಯಂತೆ ದೇವಸ್ಥಾನದ ಆದಾಯದಲ್ಲಿ ಶೇ.35 ಮೀರದಂತೆ 6ನೇ ವೇತನ ಆಯೋಗದ ವೇತನ ನೀಡಲು ನಿರ್ಣಯಿಸಿದೆ ಎಂದು ಸಚಿವ ಕೋಟ ಹೇಳಿದರು.
100 ದೇವಸ್ಥಾನಗಳಲ್ಲಿ ಏಕ ಕಾಲಕ್ಕೆ ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲು ನಿರ್ಧರಿಸಲಾಗಿದ್ದು ಇನ್ನೆರಡು ದಿನಗಳಲ್ಲಿ ಚುನಾವಣಾ ನೀತಿ ಸಂಹಿತೆ ಅನ್ವಯವಾಗದ ಪ್ರದೇಶಗಳ ದೇವಸ್ಥಾನಗಳಲ್ಲಿ ನೋಟೀಸು ಜಾರಿಗೊಳಿಸಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…