ಮಡಿಕೇರಿ: ಜಿಲ್ಲೆಯಲ್ಲಿ ಜೂ.20ರಿಂದ ಸಾಧಾರಣ ಮುಂಗಾರು ಮಳೆ ಅರಂಭವಾಗಲಿದ್ದು, ಈ ಸಂಬಂಧ ಅಧಿಕಾರಿಗಳು ಮುಂದಿನ 2-3 ದಿನಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವುದರೊಂದಿಗೆ ಜೂ. 19 ರಿಂದ ಸಕಲ ಸನ್ನದ್ಧರಾಗಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿನ ಜನರನ್ನು ಮಳೆಗಾಲ ಮುಗಿಯುವವರೆಗೆ ಮುಂಜಾಗ್ರತೆ ದೃಷ್ಟಿಯಿಂದ ಪುರ್ನವಸತಿ ಕೆಂದ್ರಗಳಿಗೆ ಸ್ಥಳಾಂತರಿಸಲು ಅಗತ್ಯ ಕ್ರಮಕೈಗೊಳುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ತುರ್ತು ಪರಿಹಾರ ಕಾರ್ಯ ಹಾಗೂ ಮುಂಜಾಗ್ರತಾ ಕ್ರಮಗಳ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ನೈರ್ಸಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮಾಹಿತಿಯ ಅನ್ವಯ ಜೂ. 20 ರಿಂದ ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಭೂ ಸರ್ವೇಕ್ಷಣಾ ಇಲಾಖೆ ಗುರುತಿಸಿರುವ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿನ ಜನರನ್ನು ಮುಂಜಾಗ್ರತಾ ಕ್ರಮವಾಗಿ ಮಳೆಗಾಲ ಮುಗಿಯುವವರೆಗೆ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಪುನರ್ವಸತಿ ಸಂಬಂಧ ಪ್ರಥಮ ಹಾಗೂ ದ್ವಿತೀಯ ಪಟ್ಟಿಯಲ್ಲಿರುವ ಅರ್ಹ ಫಲಾನುಭವಿಗಳಿಗೆ ಮುಂದಿನ ಮೂರು ತಿಂಗಳಿಗೆ ಅವಶ್ಯವಿರುವ ಮನೆ ಬಾಡಿಗೆ ಹಣವನ್ನು ಎರಡು ದಿನಗಳಲ್ಲಿ ಪಾವತಿಸಲು ಕ್ರಮಕೈಗೊಂಡು ವರದಿ ನಿಡುವಂತೆ ಉಪವಿಭಾಗಧಿಕಾರಿ ಹಾಗೂ ಪುನರ್ವಸತಿ ವಿಶೇಷ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಅವರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಈಗಾಗಲೇ ಗುರುತಿಸಿರುವ ಪ್ರಕೃತಿ ವಿಕೋಪ ಸಂಭವಿಸಿದ ಪ್ರದೇಶದಲ್ಲಿನ ಜನರಿಗೆ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತದ ವತಿಯಿಂದ ತೆರೆಯಲಾಗುವ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸುವುದು ಹಾಗೂ ಈ ಪ್ರದೇಶಗಳಲ್ಲಿವಾಸಿಸುವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ವಿದ್ಯಾರ್ಥಿ ನಿಲಯಗಳಲ್ಲಿ ವಸತಿ ಕಲ್ಪಿಸಲು ಅಗತ್ಯ ಕ್ರಮ ಕೈಗೊಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅನೀಸ್ ಕಣ್ಮಣಿ ಜಾಯ್ ಅವರು ನಿರ್ದೇಶನ ನೀಡಿದರು.
ಮಳೆಯಿಂದ ಉಂಟಾಗಬಹುದಾದ ಅನಾಹುತಗಳನ್ನು ಸಮರ್ಥವಾಗಿ ತಡೆಯುವ ನಿಟ್ಟಿನಲ್ಲಿ ಅಗತ್ಯವಿರುವ ಜೀವ ರಕ್ಷಕ ಜಾಕೆಟ್, ರೈನ್‍ಕೋಟ್, ಟಾರ್ಪಲ್‍ಗಳ ದಾಸ್ತಾನು ಮಾಡಿಕೊಂಡು ಅಗತ್ಯ ಬಿದ್ದಲ್ಲಿ ಬಳಸಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಭೂ ಸರ್ವೇಕ್ಷಣಾ ಇಲಾಖೆ ಗುರುತಿಸಿರುವ ಸೂಕ್ಷ್ಮ ಪ್ರದೇಶಗಳಲ್ಲಿನ ತೀವ್ರ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ರೋಗಿಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಹಾಗೂ ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಕೃತಿ ವಿಕೋಪದಿಂದ ಸಂಭವಿಸಬಹುದಾದ ಅನಾಹುತಗಳನ್ನು ಸಮರ್ಥವಾಗಿ ನಿರ್ವಹಿಸಲು ನೋಡಲ್ ಅಧಿಕಾರಿಗಳು ತೆಗೆದುಕೊಳ್ಳುವ ನಿರ್ಧಾರವು ಸಾರ್ವಜನಿಕರಿಗೆ ಅನುಕೂಲಕರವಾಗಿರಬೇಕು. ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಬರೆ ಕುಸಿತ ಸಂಭವಿಸಬಹುದಾದ ಪ್ರದೇಶಗಳಲ್ಲಿ ಭೂ ಕುಸಿತ ಉಂಟಾದಾಗ ತೆರವು ಕಾರ್ಯಾಚರಣೆ ನಡೆಸಲು ಅವಶ್ಯವಿರುವ ಹಿಟಾಚಿ, ಜೆಸಿಬಿಗಳನ್ನು ಸನ್ನದ್ಧವಾಗಿಟ್ಟುಕೊಂಡು ಕಾರ್ಯಾಚರಣೆಗೆ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲಕ್ಷ್ಮಿ ಪ್ರಿಯಾ ಅವರು ಮಾತನಾಡಿ, ಈಗಾಗಲೇ 42 ಪುನರ್ವಸತಿ ಕೇಂದ್ರಗಳ ನಿರ್ವಹಣೆಗೆ ಬೇಕಾಗಿರುವ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಸೂಕ್ಷ್ಮ ಪ್ರದೇಶದ ಜನರನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲು ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ತುರ್ತು ಸೇವೆಗಳಿಗೆ ಅವಶ್ಯವಿರುವ ವಾಹನಗಳನ್ನು ಸನ್ನದ್ಧವಾಗಿರಿಸಿಕೊಳ್ಳಲು ಸೂಚನೆ ನೀಡಿದರು.
ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತುರ್ತು ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳ ಕುರಿತ ಭಿತ್ತಿ ಪತ್ರಗಳನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಅನಾವರಣಗೊಳಿಸಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಹಾಗೂ ಪುನರ್ವಸತಿ ವಿಶೇಷ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಜಿ.ಪಂ ಯೋಜನಾ ನಿರ್ದೇಶಕ ಗುಡೂರು ಭೀಮಸೇನ್, ಭೂ ದಾಖಲೆಗಳ ಉಪ ನಿರ್ದೇಶಕ ಶ್ರೀನಿವಾಸ್, ಭೂ ದಾಖಲೆಗಳ ಸಹಾಯಕ ನಿರ್ದೇಶಕ ಶಂಷುದ್ದೀನ್, ತಹಶೀಲ್ದಾರರು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಇತರರು ಇದ್ದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…