ಸುಳ್ಯ: ಕೇಂದ್ರ ಸರಕಾರದ ವತಿಯಿಂದ ಅಂಚೆ ಕಚೇರಿಗಳಲ್ಲಿ ಲಭ್ಯವಿರುವ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಜನಜಾಗೃತಿ ಕಾರ್ಯಕ್ರಮವನ್ನು ಅಂಚೆ ಕಚೇರಿ ಮತ್ತು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗ ಸೆ.22 ರಂದು ಐವರ್ನಾಡಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಲಕ್ಷ್ಮೀನಾರಾಯಣ ಎನ್. ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರಕಾರದ ಉತ್ತಮ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಅಗತ್ಯತೆ ಇದೆ. ಸೆ.22 ಮತ್ತು ಮುಂದಿನ 2 ಆದಿತ್ಯವಾರ ದಂದು ಐವರ್ನಾಡು ಗ್ರಾಮದ ಸಂಪೂರ್ಣ ಜನರಿಗೆ ತಲುಪುವಂತೆ ಈ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು. ಈ ಕಾರ್ಯಕ್ರಮ ಕ್ಕೆ ಗ್ರಾಮ ಪಂಚಾಯತ್ ಐವರ್ನಾಡು,
ಅಂಚೆ ಇಲಾಖೆ , ಕೆವಿಜಿ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳು ಸಹಕಾರ ನೀಡಲಿದ್ದಾರೆ
ಪುತ್ತೂರು ಪ್ರಧಾನ ಅಂಚೆ ವ್ಯವಸ್ಥಾಪಕರಾದ ಎನ್. ಹರ್ಷ ಮಾಹಿತಿ ನೀಡಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪ್ರಥಮ್ ಮೂಡಿತ್ತಾಯ ಉಪಸ್ಥಿತರಿದ್ದರು.