ಬಾಳಿಲ: ಭಾರತೀಯ ಕಿಸಾನ್ ಸಂಘದ ವತಿಯಿಂದ ಸೆ.22 ರಂದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ವಠಾರದಲ್ಲಿ ಬೆಳಗ್ಗೆ 10 ರಿಂದ ಬಲರಾಮ ಜಯಂತಿ ಹಾಗೂ 16 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಹಾಗೂ ವಿಚಾರಗೋಷ್ಠಿ, ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಭಾರತೀಯ ಕಿಸಾನ್ ಸಂಘ ಬಾಳಿಲ-ಮುಪ್ಪೇರ್ಯ ಹಾಗೂ ಭಾರತೀಯ ಕಿಸಾನ್ ಸಂಘ ಸುಳ್ಯ, ಗುತ್ತಿಗಾರು-ನಾಲ್ಕೂರು , ಎಣ್ಮೂರು ಇವುಗಳ ಸಹಭಾಗಿತ್ವದಲ್ಲಿ ನಡೆಯುವ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ವಹಿಸುವರು. ಅತಿಥಿಗಳಾಗಿ ಕೃಷಿಕ ಕಡಮಜಲು ಸುಭಾಶ್ ರೈ ಭಾಗವಹಿಸುವರು.
ಸಭಾಕಾರ್ಯಕ್ರಮದ ಬಳಿಕ ಮಾಡಾವು 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಪೂರ್ಣಗೊಳಿಸುವ ಬಗ್ಗೆ ಹೋರಾಟ ಹಾಗೂ ಪರಿಣಾಮಗಳ ವಿಚಾರಗೋಷ್ಠಿ ನಡೆಯಲಿದೆ. ರಮೇಶ್ ಕೋಟೆ ಹಾಗೂ ಜಯಪ್ರಸಾದ್ ಜೋಶಿ ವಿಚಾರ ಮಂಡಿಸಲಿದ್ದಾರೆ. ಇದೇ ಸಂದರ್ಭ ಸದಾಶಿವ ನಾಯಕ್, ರುಕ್ಮಯ್ಯ ಗೌಡ, ಭಾನುಪ್ರಕಾಶ್ ಮರುಂಗಳ ಅವರಿಗೆ ಸನ್ಮಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಸಂದರ್ಭ ಶ್ರೀ ಎಂಟರ್ ಪ್ರೈಸಸ್ ಇವರಿಂದ ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆ ನಡೆಯಲಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…