ಬೆಳ್ಳಾರೆ: ಭಾರತೀಯ ಕಿಸಾನ್ ಸಂಘದ ವತಿಯಿಂದ ಸೆ.22 ರಂದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ವಠಾರದಲ್ಲಿ ಬೆಳಗ್ಗೆ 10 ರಿಂದ ಬಲರಾಮ ಜಯಂತಿ ಹಾಗೂ 16 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಹಾಗೂ ವಿಚಾರಗೋಷ್ಠಿ, ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಭಾರತೀಯ ಕಿಸಾನ್ ಸಂಘ ಬಾಳಿಲ-ಮುಪ್ಪೇರ್ಯ ಹಾಗೂ ಭಾರತೀಯ ಕಿಸಾನ್ ಸಂಘ ಸುಳ್ಯ, ಗುತ್ತಿಗಾರು-ನಾಲ್ಕೂರು , ಎಣ್ಮೂರು ಇವುಗಳ ಸಹಭಾಗಿತ್ವದಲ್ಲಿ ನಡೆಯುವ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ವಹಿಸುವರು. ಅತಿಥಿಗಳಾಗಿ ಕೃಷಿಕ ಕಡಮಜಲು ಸುಭಾಶ್ ರೈ ಭಾಗವಹಿಸುವರು.
ಸಭಾಕಾರ್ಯಕ್ರಮದ ಬಳಿಕ ಮಾಡಾವು 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಪೂರ್ಣಗೊಳಿಸುವ ಬಗ್ಗೆ ಹೋರಾಟ ಹಾಗೂ ಪರಿಣಾಮಗಳ ವಿಚಾರಗೋಷ್ಠಿ ನಡೆಯಲಿದೆ. ರಮೇಶ್ ಕೋಟೆ ಹಾಗೂ ಜಯಪ್ರಸಾದ್ ಜೋಶಿ ವಿಚಾರ ಮಂಡಿಸಲಿದ್ದಾರೆ. ಇದೇ ಸಂದರ್ಭ ಸದಾಶಿವ ನಾಯಕ್, ರುಕ್ಮಯ್ಯ ಗೌಡ, ಭಾನುಪ್ರಕಾಶ್ ಮರುಂಗಳ ಅವರಿಗೆ ಸನ್ಮಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಸಂದರ್ಭ ಶ್ರೀ ಎಂಟರ್ ಪ್ರೈಸಸ್ ಇವರಿಂದ ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆ ನಡೆಯಲಿದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…