ಸುಬ್ರಹ್ಮಣ್ಯ: ಕೋಟೇಶ್ವರದಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕಾಗಿ ಸಿದ್ಧಗೊಂಡ ಬ್ರಹ್ಮರಥವು ಸೆ.30 ಸೋಮವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ಹೊರಡಲಿದೆ.
ಈ ಬಗ್ಗೆ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಹಾಗೂ ಉದ್ಯಮಿ ಅಜಿತ್ ಶೆಟ್ಟಿ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಣಿಕೆ ರೂಪದಲ್ಲಿ ಸಮರ್ಪಿಸಲಿರುವ ಬ್ರಹ್ಮ ರಥದ ಕಾರ್ಯ ಪರಿಪೂರ್ಣಗೊಂಡಿದ್ದು ಕೋಟೇಶ್ವರದಿಂದ ರಥವು ಸೆ.30 ಸೋಮವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ಹೊರಡಲಿದೆ ಎಂದು ತಿಳಿಸಿದರು. 400 ವರ್ಷಗಳಷ್ಟು ಹಳೆಯದಾದ ರಥದ ಮಾದರಿಯಲ್ಲೇ ನೂತನ ರಥವನ್ನು ರಥಶಿಲ್ಪಿ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ ಕೈಚಳಕದಲ್ಲಿ ವೈಶಿಷ್ಟ್ಯಪೂರ್ಣವಾಗಿ ಮೂಡಿಬಂದಿದೆ ಎಂದು ವಿವರಿಸಿದರು.
ನೂತನ ಬ್ರಹ್ಮರಥವು ಉಡುಪಿ- ಪಡುಬಿದ್ರೆ ಮಾರ್ಗವಾಗಿ ಕದ್ರಿ- ಬಿ.ಸಿ.ರೋಡ್- ಉಪ್ಪಿನಂಗಡಿ, ಕಡಬ ಮೂಲಕ ಅ.2ರಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ತಲುಪಲಿದ್ದು ಅಲ್ಲಿ ದೇವಳದ ಆಡಳಿತವು ಭವ್ಯ ಮೆರವಣಿಗೆಯಲ್ಲಿ ರಥವನ್ನು ಬರಮಾಡಿಕೊಂಡು ದೇವಳಕ್ಕೆ ಸಮರ್ಪಣೆಗೊಳ್ಳಲಿದೆ ಎಂದು ಸತೀಶ್ ಪೂಜಾರಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಯಕರ್ನಾಟಕ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಶ್ರೀನಿವಾಸ ಶೆಟ್ಟಿಗಾರ್ , ಗೌರವ ಸಲಹೆಗಾರ ಸುಧಾಕರ ರಾವ್ , ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಅಮೀನ್ ಉಡುಪಿ , ಹೋರಾಟ ಸಮಿತಿ ಅಧ್ಯಕ್ಷ ಕರುಣಾಕರ ಪೂಜಾರಿ, ಕಾರ್ಯಾಧ್ಯಕ್ಷ ಶರತ್ ಕುಂದಾಪುರ, ಮುಂತಾದವರು ಇದ್ದರು.
23.12.24ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
22.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
ಒಡಿಶಾ ರಾಜ್ಯ ಸರ್ಕಾರವು ಕೃಷಿಯಲ್ಲಿ ಹೊಸವಿಧಾನಗಳ, ಪರ್ಯಾಯ ಕೃಷಿಯ ಪಾತ್ರವನ್ನು ಪರೋಕ್ಷವಾಗಿ ಕೃಷಿಕರಿಗೆ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್…
ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಾಡಲಗೇರಿ ಗ್ರಾಮದಲ್ಲಿ…
ಹವಾಮಾನದ ಕಾರಣದಿಂದ ಕೃಷಿ ಹಾನಿ ಉಂಟಾಗಿ ನಷ್ಟವಾದ ಸಂದರ್ಭದಲ್ಲಿ ಅಥವಾ ಬೆಲೆ ಕುಸಿತದಂತಹ…