ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ(ರಿ.), ರೋಟರಿ ಕ್ಲಬ್ ಸುಳ್ಯ ಸಿಟಿ ಹಾಗೂ ಮಲೆನಾಡು ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಸೇವಾನಿರತ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರವು ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಎನ್.ಎ.ಕುಂಞ ಅಹಮ್ಮದ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ಅಧ್ಯಕ್ಷ ಡಾ. ಉಮ್ಮರ್ ಬೀಜದಕಟ್ಟೆ ಹಾಗೂ ಬೆಂಗಳೂರು ಫಾರ್ಮೆಡ್ ಲಿಮಿಟೆಡ್ ಇದರ ತರಬೇತಿ ವಿಭಾಗದ ಪ್ರಧಾನ ವ್ಯವಸ್ಥಾಪಕರಾದ ವಿಕ್ರಮ್ ಸಾಗರ್ ಸಕ್ಸೇನಾ ತರಬೇತಿ ನಡೆಸಿಕೊಟ್ಟರು.
ಮುಖ್ಯ ಅತಿಥಿಗಳಾಗಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಎಂ.ಟಿ.ವೀಣಾ, ರೋಟರಿ ಕ್ಲಬ್ ಸುಳ್ಯ ಸಿಟಿ ಅಧ್ಯಕ್ಷ ಭಾನುಪ್ರಕಾಶ್, ಮಲೆನಾಡು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಿಯಾಝ್ ಕಟ್ಟೆಕ್ಕಾರ್, ವ್ಯಕ್ತಿತ್ವ ವಿಕಸನ ಅಧಿಕಾರಿ ಉಮ್ಮರ್ ಫಾರೂಕ್(ಅಲ್ ಐನ್ ಯುಎಇ), ಡಿಜಿಎಂ ಫಾರ್ಮೆಡ್ ಹಾರಿಸ್ ಪಿ.ಎಂ, ಆರ್.ಕೆ.ಮಹಮ್ಮದ್, ಶಹೀದ್ ಪಾರೆ, ಶಿಯಾಬುದ್ದೀನ್ ಬೂಡು, ರಫೀಕ್ ಚೆಂಗಳ ಮತ್ತಿತರರು ಉಪಸ್ಥಿತರಿದ್ದರು.
ಚಂದ್ರಕಲಾ ಪ್ರಾರ್ಥಿಸಿ, ಉಮ್ಮರ್ ಫಾರೂಕ್ ಕಾರ್ಯಕ್ರಮ ನಿರೂಪಿಸಿದರು.