ಸೇವಾ ಬದ್ಧತೆಯಿಂದ ಹತ್ತು ಹಲವು ಪಾತ್ರಗಳನ್ನು ನಿರ್ವಹಿಸುವವರು ದಾದಿಯರು 

September 12, 2019
2:30 PM

ಸುಳ್ಯ: ದಾದಿಯರು ಕೇವಲ ಅನಾರೋಗ್ಯದ ಸಂದರ್ಭದಲ್ಲಿ ಮಾತ್ರ ಸೇವೆಗೆ ಸೀಮಿತರಲ್ಲ. ಅವರು ವಿವಿಧ ಪಾತ್ರಗಳನ್ನು ಆರೋಗ್ಯಕ್ಷೇತ್ರದಲ್ಲಿ ಸಮರ್ಥವಾಗಿ ನಿಭಾಯಿಸುವವರು ಎಂದು ಕೆವಿಜಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೇಮ  ಬಿ ಎಂ ಅವರು ಹೇಳಿದರು.

Advertisement
Advertisement

ವಿದ್ಯಾರ್ಥಿಗಳಿಗೆ ನರ್ಸಿಂಗ್ ಕ್ಷೇತ್ರದಲ್ಲಿ ಇರುವ ವಿಫುಲ ಅವಕಾಶಗಳ ಕುರಿತು ಅಗತ್ಯ ಮಾಹಿತಿಯನ್ನೂ ನೀಡುವ ಮೂಲಕ ನರ್ಸಿಂಗ್ ಕ್ಷೇತ್ರದ ಅಗಾಧತೆಯ ಬಗ್ಗೆ ಬೆಳಕು ಚೆಲ್ಲಿದರು. ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುವ ಇವರು ಓರ್ವ ಆಡಳಿತಗಾರಳಾಗಿ, ಶಿಕ್ಷಕಿಯಾಗಿ, ಮಾರ್ಗದರ್ಶಕಳಾಗಿ ಹೀಗೆ ಹತ್ತು ಹಲವು ಪಾತ್ರಗಳನ್ನು ಸೇವಾ ಬದ್ಧತೆಯಿಂದ ನಿರ್ವಹಿಸುತ್ತಾ ಸಮಾಜದ ಆರೋಗ್ಯವನ್ನು ವರ್ಧಿಸುವ ಕಾರ್ಯಗಳನ್ನು ಮಾಡುವವರು ಎಂದು ಹೇಳಿದರು.

Advertisement

ಕಾರ್ಯಕ್ರಮದಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಅವರು ಮಾತನಾಡಿ ಪ್ರಪಂಚದಲ್ಲಿ ನರ್ಸಿಂಗ್ ಶಿಕ್ಷಣ ಇಂದು ಬಹಳ ಬೇಡಿಕೆಯ ವಿಷಯವಾಗಿದೆ ಮತ್ತು ಸೇವೆ ನೀಡುವ ನಿಟ್ಟಿನಲ್ಲಿ ಈ ಕ್ಷೇತ್ರ ಶ್ಲಾಘನೀಯ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು ಮಾತನಾಡಿ ಸಂಪಾದನೆಗೆ ಮಾತ್ರ ಸೀಮಿತವಿರುವ ಉದ್ಯೋಗಾವಕಾಶಗಳು ಬಹಳಷ್ಟಿವೆ. ಆದರೆ ಮನುಷ್ಯನಿಗೆ ಸೇವಾ ಮನೋಭಾವದಿಂದ ಉದ್ಯೋಗವನ್ನು ನಿರ್ವಹಿಸುವಲ್ಲಿ ಈ ಕ್ಷೇತ್ರ ಉತ್ತಮ ಅವಕಾಶಗಳನ್ನು ಒದಗಿಸಿಕೊಡುತ್ತದೆ ಎಂದರು.

Advertisement

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ರಾಜಿತ ಪ್ರಾರ್ಥಿಸಿ, ಮೈಥಿಲಿ ಸ್ವಾಗತಿಸಿದರು. ದೀಕ್ಷಾ ಕಾರ್ಯಕ್ರಮ ನಿರ್ವಹಿಸಿ ಅಶ್ರಿಯ ವಂದಿಸಿದರು.

 

Advertisement

 

 

Advertisement

 

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |
May 18, 2024
1:02 PM
by: ಸಾಯಿಶೇಖರ್ ಕರಿಕಳ
ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್
May 18, 2024
1:01 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು
May 18, 2024
12:45 PM
by: The Rural Mirror ಸುದ್ದಿಜಾಲ
ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?
May 18, 2024
12:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror