Advertisement
ಸುದ್ದಿಗಳು

ಸೇವಾ ಭಾರತಿ ವತಿಯಿಂದ ವಿದ್ಯಾನಿಧಿ ವಿತರಣೆ

Share

ಮಡಿಕೇರಿ : 2018ರ ಆಗಸ್ಟ್ ತಿಂಗಳಿನಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಸಂದರ್ಭ ಸಂಕಷ್ಟಕ್ಕೀಡಾದ ಕುಟುಂಬದ ವಿದ್ಯಾರ್ಥಿಗಳಿಗೆ ಕೊಡಗು ಸೇವಾ ಭಾರತಿ ಹಾಗೂ ಬೆಂಗಳೂರಿನ ಉತ್ತರ ಕರ್ನಾಟಕ ಸ್ನೇಹ ಲೋಕ ಸಂಸ್ಥೆಯ ವತಿಯಿಂದ ವಿದ್ಯಾನಿಧಿ ಸಹಾಯಧನವನ್ನು ವಿತರಿಸಲಾಯಿತು.

ನಗರದ ಕಾಫಿ ಕೃಪಾ ಕಟ್ಟಡದಲ್ಲಿರುವ ಸೇವಾ ಭಾರತಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಉತ್ತರ ಕರ್ನಾಟಕ ಸ್ನೇಹ ಲೋಕ ಸಂಸ್ಥೆಯ ಖಜಾಂಚಿ ಪ್ರಕಾಶ್ ಸಿ. ರಾಜಗೊಳಿ ವಿದ್ಯಾರ್ಥಿಗಳಿಗೆ ಸಹಾಯಧನದ ಚೆಕ್ ವಿತರಿಸಿ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ದುರಂತ ಸಂಭವಿಸಿದ ತಕ್ಷಣ ಬೆಂಗಳೂರಿನಲ್ಲಿ ನೆಲೆಸಿರುವ ಉತ್ತರ ಕರ್ನಾಟಕ ಭಾಗದ ಜನರಿಂದ ಧನ ಸಂಗ್ರಹ ಮಾಡಿ ಶಿಕ್ಷಣಕ್ಕೆ ಆಧ್ಯತೆ ಕೊಟ್ಟು ವಿತರಿಸುವ ಯೋಜನೆಯಿತ್ತು. ಆದರೆ ಇಲ್ಲಿ ಬೇರೆ ಬೇರೆ ಸಂಘ – ಸಂಸ್ಥೆಗಳು ಆ ಸಂದರ್ಭ ವಿತರಿಸಿದ ಪರಿಣಾಮ ನಮ್ಮ ಸಂಸ್ಥೆಯು ಇಲ್ಲಿನ ಸೇವಾ ಭಾರತಿ ಸಂಸ್ಥೆಯ ಸಹಯೋಗದೊಂದಿಗೆ ಎಲ್ಲಾ ವಿದ್ಯಾರ್ಥಿಗಳ ಮನೆಯ ಪರಿಸ್ಥಿಯನ್ನು ಅವಲೋಕಿಸಿ ಇಂದು ವಿತರಣೆ ಮಾಡುತ್ತಿದ್ದೇವೆ. ಸಮಾಜದ ಹಣವನ್ನು ಪ್ರಾಮಾಣಿಕತೆಯಿಂದ ಇಂದು ಸಮಾಜದ ನಿರಾಶ್ರಿತ ಬಂಧುಗಳಿಗೆ ತಲುಪಿಸುವ ಕೆಲಸವನ್ನು ಮಾತ್ರ ನಮ್ಮ ಸಂಸ್ಥೆ ಮಾಡುತ್ತಿದೆ. ಸಮಾಜದ ನೋವಿಗೆ ಸ್ಪಂಧಿಸುವುದು ಎಲ್ಲರ ಕರ್ತವ್ಯ ಎಂದರು.

ಸೇವಾ ಭಾರತಿ ಸಂಸ್ಥೆಯ ಉಪಾಧ್ಯಕ್ಷ ಕೆ.ಕೆ.ಮಹೇಶ್‍ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವಿಧ ವಿದ್ಯಾಸಂಸ್ಥೆಯಲ್ಲಿ ಜಿಲ್ಲೆಯ ಪ್ರಕೃತಿ ವಿಕೋಪ ನಿರಾಶ್ರಿತರಾದ 45 ಮಂದಿ ವಿದ್ಯಾರ್ಥಿಗಳು ಸೇವಾ ಭಾರತಿ ಸಂಸ್ಥೆಯ ಸಹಯೋಗದೊಂದಿಗೆ ವಿದ್ಯಾಭ್ಯಾಸ ಮಾಡುತ್ತಿರುವುದನ್ನು ಮಹೇಶ್‍ಕುಮಾರ್ ನೆನಪಿಸಿಕೊಂಡರು.
ಮದೆ, ಮೊಣ್ಣಂಗೇರಿ, ಕಾಲೂರು, ಎಮ್ಮೆತ್ತಾಳು, ಮೇಘತ್ತಾಳು, ಹೊದಕಾನ, ಕಿರಗಂದೂರು ಗ್ರಾಮಗಳ ಪ್ರಕೃತಿ ವಿಕೋಪ ಸಂಕಷ್ಟಕ್ಕೆ ಒಳಗಾದ 30 ಮಂದಿ ವಿದ್ಯಾರ್ಥಿಗಳಿಗೆ ಈ ಸಂದರ್ಭ ವಿದ್ಯಾನಿಧಿ ಸಹಾಯಧನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕ ಸ್ನೇಹ ಲೋಕ ಸಂಸ್ಥೆಯ ಟ್ರಸ್ಟಿ ಕುಮಾರ್ ಹಂದೂರ್, ಅವರ ಪುತ್ರ ನಂದೀಶ್ ಹಂದೂರು, ಗಾಳಿಬೀಡು ಗ್ರಾ.ಪಂ ಸದಸ್ಯ ಧನಂಜಯ, ವಿದ್ಯಾರ್ಥಿಗಳ ಪೋಷಕರು ಹಾಗೂ ಇತರರು ಇದ್ದರು. ಸೇವಾ ಭಾರತಿ ಸಂಸ್ಥೆಯ ಚಂದ್ರ ಉಡೋತ್ ಕಾರ್ಯಕ್ರಮ ನಿರೂಪಿಸಿದರೆ, ಖಜಾಂಚಿ ಡಿ.ಹೆಚ್.ತಮ್ಮಪ್ಪ ವಂದಿಸಿದರು. ಕೊನೆಯಲ್ಲಿ ಶಾಂತಿಮಂತ್ರವನ್ನು ಪಠಿಸಲಾಯಿತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

6 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

6 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

10 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

20 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

21 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

1 day ago