ಜನ ಅವರ ತೀರ್ಪು ನೀಡಿದ್ದಾರೆ. ಅವರ ಜನಾದೇಶವನ್ನು ಸ್ವಾಗತಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿಗಳು, ರಾಜ್ಯದ ಜನತೆ ನೀಡಿರುವ ಆದೇಶವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ ಎಂದಿದ್ದಾರೆ.
ಇದೇ ವೇಳೆ ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಮಾಜಿ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ ಎಂದು ಧೈರ್ಯ ತುಂಬಿದ್ದಾರೆ.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…