ಬೆಳ್ಳಾರೆ: ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ.) ಮಂಗಳೂರು ಹಾಗೂ ವೈಷ್ಣವಿ ನಾಟ್ಯಲಯ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಇವರ ನೃತ್ಯ ನಿರ್ದೇಶನದಲ್ಲಿ ಬೆಳೆದ ಸ್ನೇಹ ಭಟ್ ಚೂಂತಾರು ಇವರ ಶಾಸ್ತ್ರೀಯ ಮತ್ತು ಜನಪದ ನೃತ್ಯ ತರಗತಿಯನ್ನು ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿ ಅಧ್ಯಕ್ಷರಾದ ದಯಾನಂದ ಕತ್ತಲ್ ಸಾರ್ ದೀಪ ಬೆಳಗಿಸಿ ಉದ್ಘಾಟಿಸಿ ಸ್ನೇಹಳಿಗೆ ಸರಿಯಾದ ಗುರು ಸಿಕ್ಕಿದ್ದಾರೆ ಹಾಗೂ ಒಳ್ಳೆಯ ಗುರಿಯೂ ಇದೆ, ತಾನು ಕಲಿತ ಕಲೆಯನ್ನು ಇನ್ನೊಬ್ಬರಿಗೆ ಕಲಿಸುವ ಮನಸ್ಸು ಮಾಡಿರುವುದು ಹಾಗೂ ಇದಕ್ಕೆ ತನ್ನ ಮನೆಯವರ ಬೆಂಬಲ ಇರುವುದರಿಂದ ನೃತ್ಯ ತರಗತಿಯಲ್ಲಿ ಸಾಧನೆಯನ್ನು ಮಾಡಿ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸ್ನೇಹ ಭಟ್ ಚೂಂತಾರು ಇವರು ತಮ್ಮ ಗುರುಗಳಾದ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಇವರಿಗೆ ಗುರುವಂದನೆಯನ್ನು ಸಲ್ಲಿಸಿದರು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ.) ಮಂಗಳೂರು ಇದರ ಗೌರವ ಅಧ್ಯಕ್ಷರಾದ ಚೂಂತಾರು ಲಕ್ಷ್ಮೀ ನಾರಾಯಣ ಭಟ್ ಗೌರವ ಉಪಸ್ಥಿತರಾಗಿದ್ದರು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ.) ಮಂಗಳೂರು ಇದರ ಟ್ರಸ್ಟಿಯಾದ ಮಹೇಶ್ ಭಟ್ ಚೂಂತಾರು ಸ್ವಾಗತಿಸಿದರು. ಸ್ನೇಹ ಭಟ್ ಧನ್ಯವಾದ ಸಲ್ಲಿಸಿದರು. ಕಾರ್ಯದರ್ಶಿಯಾದ ಮುರಳಿ ಮೋಹನ್ ಚೂಂತಾರು ಕಾರ್ಯಕ್ರಮ ನಿರೂಪಿಸಿದರು.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …