ಮಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖಾ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಐ.ಪಿ.ಪಿ.ಎಸ್, ಬ್ಯಾಂಕಿಂಗ್, ಎಸ್.ಎಸ್.ಸಿ ಹಾಗೂ ರೈಲ್ವೆ ಇಲಾಖೆಗಳು ನಡೆಸುವ ಪರೀಕ್ಷೆಗಳಿಗೆ ಸಿ.ಎಲ್. ಎಜುಕೇಟ್ ಲಿಮಿಟೆಡ್, ಬೆಂಗಳೂರು ಇವರ ವತಿಯಿಂದ ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
ಆಸಕ್ತ 18 ರಿಂದ 35 ವರ್ಷಗಳೊಳಗಿರುವ ಯಾವುದೇ ಪದವೀಧರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ, ವಿದ್ಯಾರ್ಹತೆಯ ಅಂಕಪಟ್ಟಿಗಳು, ಆಧಾರ್ ಕಾರ್ಡ್‍ಗಳ ನಕಲು ಪ್ರತಿಗಳೊಂದಿಗೆ ಫೆಬ್ರವರಿ 27 ರೊಳಗೆ ಅರ್ಜಿಯನ್ನು ಜಿಲ್ಲಾ ಉದ್ಯೋಗ ವಿನಿಮಯ, ಕಚೇರಿ, ಮಹಾನಗರಪಾಲಿಕೆ ಕಟ್ಟಡ, ಲಾಲ್‍ಬಾಗ್, ಮಂಗಳೂರು ಇಲ್ಲಿಗೆ ಸಲ್ಲಿಸಬೇಕು. ಹಾಗೂ ಸಂಬಂಧಿತ ವೆಬ್‍ಸೈಟ್‍ನಲ್ಲಿ ಅಭ್ಯರ್ಥಿಗಳು ಹೆಸರನ್ನು ನೋಂದಾಯಿಸಕೊಳ್ಳಬೇಕು. ಪೂರ್ವಭಾವಿ ತರಬೇತಿಗೆ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶಿಷ್ಯವೇತನ/ಟಿಎ/ಡಿಎ ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪ್ರಶಾಂತ್ ಮೊಬೈಲ್ ಸಂಖ್ಯೆ : 9964322070 ಹಾಗೂ ದಯಾನಂದ ಮೊಬೈಲ್ ಸಂಖ್ಯೆ 9663079943 ಇವರನ್ನು ಸಂಪರ್ಕಿಸಲು ಉದ್ಯೋಗಾಧಿಕಾರಿ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಮೇಳ ಇವರ ಪ್ರಕಟಣೆ ತಿಳಿಸಿದೆ.