ಸುಳ್ಯ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಹೇಗೆ ಎನ್ನುವ ಬಗ್ಗೆ ಲಿಖಿತ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು.
ಪ್ರಾಂಶುಪಾಲ ಡಾ.ಅಚ್ಯುತ ಪೂಜಾರಿ ಉದ್ಘಾಟಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಜಯಶ್ರೀ ಕೆ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತೀಶ್ ಕುಮಾರ್ ಕೆ.ಆರ್.ಉಪಸ್ಥಿತರಿದ್ದರು.
ಪದವಿ ಹಾಗೂ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗಾಗಿ ಲಿಖಿತ ರಸಪ್ರಶ್ನೆಯನ್ನು ಹಮ್ಮಿಕೊಳ್ಳಲಾಗಿತ್ತು. ಸುಳ್ಯ ತಾಲೂಕು ಮತ್ತು ಹೊರ ತಾಲೂಕಿನ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 200ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಈ ಸ್ಫರ್ಧೆಯಲ್ಲಿ ಭಾಗವಹಿಸಿದ್ದರು.
ಇತಿಹಾಸ ವಿಭಾಗದ ಮುಖ್ಯಸ್ಥ ಹಾಗು ಕಾರ್ಯಕ್ರಮದ ಸಂಯೋಜಕರಾದ ಶಿವಾನಂದ ಜಿ ಸ್ವಾಗತಿಸಿ, ಉಪನ್ಯಾಸಕಿ ಸುಮಲತ ವಂದಿಸಿದರು. ಬೇಬಿ ಹಾಗೂ ಸೌಮ್ಯ ಪ್ರಾರ್ಥಿಸಿದರು. ವಿದ್ಯಾರ್ಥಿನಿ ರಶ್ಮಿತಾ ಬಿ ಕಾರ್ಯಕ್ರಮ ನಿರೂಪಿಸಿದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?