ಬೆಳ್ಳಾರೆ : ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳ್ಳಾರೆ, ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಜೆ.ಸಿ.ಐ. ಬೆಳ್ಳಾರೆ ಹಾಗೂ ಡಾ| ಕೆ. ಶಿವರಾಮ ಕಾರಂತ ಪ್ರ.ದರ್ಜೆ ಕಾಲೇಜು ಬೆಳ್ಳಾರೆಯ ಸಮಾಜ ಕಾರ್ಯ ವಿಭಾಗಗಳ ಸಹಭಾಗಿತ್ವದಲ್ಲಿ ಸ್ವಚ್ಛ ಬೆಳ್ಳಾರೆ, ಡೆಂಘೆ , ಕ್ಷಯರೋಗಗಳ ಜಾಗೃತಿ ಕಾರ್ಯಕ್ರಮವು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು.
ಸಂಪನ್ಮೂಲ ವ್ಯಕ್ತಿಯಾಗಿ ಪೆರ್ಲಂಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ| ಅಮಿತ್ ಅವರು ಮಾತನಾಡಿ, ಡೆಂಘೆ ಕಾಯಿಲೆಗೆ ನಿರ್ದಿಷ್ಟ ಔಷಧಿವಿರುವುದಿಲ್ಲ. ಜಾಲತಾಣಗಳಲ್ಲಿ ನಮೂದಿಸಿರುವ ಔಷಧಗಳ ಬಗ್ಗೆ ಯಾವುದೇ ಭರವಸೆಯಿಲ್ಲ. ಜ್ವರ ಇತ್ಯಾದಿ ಕಾಯಿಲೆಗಳಿಗೆ ವೈದ್ಯರ ಭೇಟಿ ಮಾಡಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ ಎಂದು ಕರೆ ಇತ್ತರು.
ಆರೋಗ್ಯ ಕೇಂದ್ರದ ವೈದ್ಯೆ ಡಾ| ಅಶ್ವಥಿ, ಮಾತನಾಡಿ ಕಾಯಿಲೆ ಹಬ್ಬದಂತೆ, ಪರಿಸರವನ್ನು ಸ್ವಚ್ಛವಾಗಿಸುವ ಬಗ್ಗೆ ಜಾಗೃತಿ ಮೂಡಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರೋಟರಿ ಕ್ಲಬ್ ಟೌನ್‍ನ ಅಧ್ಯಕ್ಷ ಬಿ. ನರಸಿಂಹ ಜೋಶಿ ಮಾತನಾಡಿ, ಡೆಂಗ್ಯೂ ಇನ್ನಿತರ ಮಾರಕ ಕಾಯಿಲೆಗಳ ಬಗ್ಗೆ ಪ್ರತಿಯೊಬ್ಬರೂ ಸೂಕ್ತ ಮಾಹಿತಿ ಪಡಕೊಂಡು ಆರೋಗ್ಯವಂತ ಸಮಾಜವನ್ನು ಕಟ್ಟಲು ಸಹಕರಿಸಬೇಕೆಂದು ಕೋರಿದರು.
ಬೆಳ್ಳಾರೆ ಗ್ರಾ.ಪಂ. ಸದಸ್ಯ ಮಹಮ್ಮದ್ ಆರೀಫ್ ಅವರು ‘ಸ್ವಚ್ಛ ಬೆಳ್ಳಾರೆ’ಯ ಕನಸನ್ನು ನನಸಾಗಿಸಲು ಪ್ರತಿಯೊಬ್ಬರೂ ಸಹಕರಿಸುವಂತೆ ಮನವಿ ಮಾಡಿದರು.
ಜೆ.ಸಿ.ಐ.ನ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ಸ್ವಾಗತಿಸಿ ಕ್ಷಯರೋಗ ನಿರ್ಮೂಲನೆ ಬಗ್ಗೆ ಮಾಹಿತಿ ನೀಡಿದರು. ರೋಟರಿ ಕ್ಲಬ್‍ನ ಕಾರ್ಯದರ್ಶಿ ಗೋಪಾಲಕೃಷ್ಣ ಪಿ. ಯಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್‍ನ ಶ್ಯಾಮಸುಂದರ ರೈ, ಏ.ಕೆ. ಮಣಿಯಾಣಿ, ಐತ್ತಪ್ಪ ಗೌಡ ಕಾವಿನಮೂಲೆ, ಸೀತಾರಾಮ ನೆಟ್ಟಾರು, ಜೆ.ಸಿ.ಐ.ನ ಪ್ರಸಾದ್ ಸೇವಿತ ಉಪಸ್ಥಿತರಿದ್ದರು.
ಕೇಂದ್ರದ ಆಶಾ ಕಾರ್ಯಕರ್ತೆಯರು, ಕಾಲೇಜಿನ ಸಮಾಜ ಸೇವಾ ಕಾರ್ಯದ ವಿದ್ಯಾರ್ಥಿಗಳು ಹಾಗೂ ಸಂಘಟನೆಗಳ ಸದಸ್ಯರು, ಸ್ವಚ್ಛ ಬೆಳ್ಳಾರೆಯ ಅಂಗವಾಗಿ ಪೇಟೆಯ ಇಕ್ಕೆಲೆಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ, ಇನ್ನಿತ್ತರ ಕಸಗಳನ್ನು ವಿಲೇವಾರಿ ಮಾಡಿ ಸ್ವಚ್ಛತೆಗೈದರು.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…