ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಮತ್ತು ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‍ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟಿಸಿದರು.
ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ಸತ್ಯವತಿ, ಆಡಳಿತಾಧಿಕಾರಿ ಜಗದೀಶ್ ಅಡ್ತಲೆ, ಬ್ಲಡ್ ಬ್ಯಾಂಕ್ ಅಧಿಕಾರಿ ಡಾ. ಮಹಂತದೇವರು, ನೆಹರೂ ಮೆಮೋರಿಯಲ್ ಕಾಲೇಜು ಪ್ರಾಂಶುಪಾಲ ಡಾ. ಕೆ ಗಿರಿಧರ ಗೌಡ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಧನಂಜಯ ಮದುವೆಗದ್ದೆ, ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಜವರೇಗೌಡ, ಕೆವಿಜಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ಚಂದ್ರಾವತಿ, ಡಾ. ರಾಜೇಶ್, ಚಂದ್ರಶೇಖರ್, ಗೋಪಾಲಕೃಷ್ಣ, ಉಮೇಶ್, ಪ್ರೇಮಜ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಿಬ್ಬಂದಿ ವರ್ಗ, ರೆಡ್‍ಕ್ರಾಸ್ ಸದಸ್ಯರು, ರಕ್ತದಾನಿಗಳು ಉಪಸ್ಥಿತರಿದ್ದರು.
ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಸಂಗ್ರಹಿಸಿದ 112 ಜನ ರಕ್ತದಾನಿಗಳ ಪಟ್ಟಿಯನ್ನು ಅಗತ್ಯ ಬಿದ್ದಾಗ ರಕ್ತದಾನ ಮಾಡಲು ಕಾಲೇಜಿನ ಪ್ರಾಂಶುಪಾಲರು ಡಾ. ಕೆ ವಿ ಚಿದಾನಂದ ಅವರಿಗೆ ಹಸ್ತಾಂತರಿಸಿದರು.
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…