ಸುಳ್ಯ: ಚಾಲ್ತಿಯಲ್ಲಿರುವ ಯಾವುದೇ ಕಾನೂನನ್ನು ಮೀರಿ ಮಾಡಿದ ಕೃತ್ಯ ಅಥವಾ ಘಟನೆ ಅಪರಾಧವೆನಿಸುತ್ತದೆ. ಹಾಗಾಗಿ ಸ್ವಸ್ಥ ಬದುಕಿಗೆ ನಿಯಮಗಳ ಪಾಲನೆ ಅಗತ್ಯ ಎಂದು ಸುಳ್ಯ ವೃತ್ತ ನಿರೀಕ್ಷಕ ನವೀನ್‍ಚಂದ್ರ ಜೋಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್‍ಕ್ರಾಸ್ ಘಟಕದ ವತಿಯಿಂದ ಹಮ್ಮಿಕೊಂಡ ಅಪರಾಧ ತಡೆ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ದಿನದಲ್ಲಿ ಅಪರಾಧಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಯಾವ ವ್ಯಕ್ತಿಗೆ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದಕ್ಕೆ ಅಡೆತಡೆಯಾಗುವುದೋ ಆಗ ಅಪರಾಧಗಳು ಪ್ರಾರಂಭವಾಗುತ್ತವೆ. ಎಲ್ಲರೂ ಪ್ರಯತ್ನಪಟ್ಟರೆ ಅಪರಾಧ ಪ್ರಕರಣವನ್ನು ತಡೆಗಟ್ಟಬಹುದು. ಹಾಗಾಗಿ ಅದರ ಬಗ್ಗೆ ಮಾಹಿತಿ ಪಡೆಯಬೇಕಾದ ಅಗತ್ಯವಿದೆ ಎಂದರು.
ಸುಬ್ರಹ್ಮಣ್ಯ ಪೋಲೀಸ್ ಠಾಣೆಯ ಪೋಲೀಸ್ ಕಾನ್ಸ್ ಟೇಬಲ್ ಭೀಮನಗೌಡ ಬಿರಾದಾರ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕ ಶ್ರೀಧರ್ ವಿ, ರೆಡ್‍ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತೇಜಸ್ವಿನಿ ಮತ್ತು ಮೌನ ಪ್ರಾರ್ಥಿಸಿದರು. ಮೌನವಿ ಸ್ವಾಗತಿಸಿ, ಮೌನ ವಂದಿಸಿದರು. ಕಾವ್ಯಾ ಕೆ ಡಿ ಕಾರ್ಯಕ್ರಮ ನಿರೂಪಿಸಿದರು. ಮಾಹಿತಿ ಕಾರ್ಯಕ್ರಮದ ನಂತರ ಸಂವಾದ ಚರ್ಚೆ ನಡೆಯಿತು.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…