ಗುತ್ತಿಗಾರು: ಸ್ವಾತಂತ್ರೋತ್ಸವದಂದು ಮತ್ತೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ ಗಮನ ಸೆಳೆದಿದೆ. ಇಲ್ಲಿನ ಶಾಲಾ ಮಕ್ಕಳು ಇಂಗ್ಲಿಷ್ ನಲ್ಲಿಯೇ ಕಾರ್ಯಕ್ರಮ ನಿರೂಪಣೆ ಮಾಡಿ ಬಂದಿರುವವರೆಲ್ಲರ ಹುಬ್ಬೇರುವಂತೆ ಮಾಡಿದ್ದೂ ಅಲ್ಲದೆ ಶಾಲೆ ಮತ್ತೆ ಎಲ್ಲರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ ಕಡಪಳ ಧ್ವಜಾರೋಹಣ ಮಾಡಿ ಶುಭಹಾರೈಸಿದರು. ಈ ಸಂದರ್ಭ ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ ಪುಷ್ಪಕರ ಮಾವಿನಕಟ್ಟೆ, ಅಂಗನವಾಡಿ ಕಾರ್ಯಕರ್ತೆ ಸುಂದರಿ, ತಾಯಂದಿರ ಸಮಿತಿ ಅಧ್ಯಕ್ಷೆ ನಿರ್ಮಲ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ ಅಚ್ರಪ್ಪಾಡಿ, ಯುವಕ ಮಂಡಲ ಮಾವಿನಕಟ್ಟೆ ಜಯಂತ,ಶಾಲಾ ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಹಾಜರಿದರು.
ಬಳಿಕ ಮಕ್ಕಳಿಂದ ಭಾಷಣ ದೇಶಭಕ್ತಿ ಗೀತೆ ಹಾಗೂ ನೃತ್ಯಕ್ಕೆ ಹೆಜ್ಜೆಹಾಕಿದರು. ಮಕ್ಕಳಿಂದ ಇಂಗ್ಲಿಷ್ ನಲ್ಲಿ ಕಾರ್ಯಕ್ರಮ ನಿರೂಪಣೆ, ಸ್ವಾಗತ ಹಾಗೂ ಧನ್ಯವಾದ ಮಾಡಿದರು.ಮಕ್ಕಳ ಇಂಗ್ಲಿಷ್ ಭಾಷಣ, ಸ್ವಾಗತ ಮಾಡುವ ರೀತಿ ನೋಡಿ ಮೆಚ್ಚುಗೆ ವ್ಯಕ್ತವಾಯಿತು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಠಾಣೆಯ ಸಿಬ್ಬಂದಿ ರೋಹಿತ್ ಹಾಜರಿದ್ದರು. ಇದೇ ಸಂದರ್ಭ ರೂ 3000 ಮೌಲ್ಯವನ್ನು 1 ನೇ ತರಗತಿಯ ಮಕ್ಕಳ ನಿರಖು ಠೇವಣಿ ನೀಡಿದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…